
ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಶೋರೂಮ್ ಆಗಿರುವ ಮುಳಿಯ ಜ್ಯುವೆಲ್ಸ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಅನಾವರಣಗೊಳ್ಳಲು ಸಿದ್ದವಾಗಿದ್ದು, ಇದನ್ನು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ್ ಅರವಿಂದ್ ರವರು ಉದಾಟಿಸಲಿದ್ದಾರೆ.
ಬೆಳಿಗ್ಗೆ 9.30 ಗಂಟೆಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಅನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ಗೆ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ.
ಶ್ರೀ ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ , ಕೋರ್ಟು ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಂಗೆ ಕರೆತರಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









