Tuesday, March 10, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಎ.20 ರಂದು ಉದ್ಘಾಟನೆ -ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ನಿರ್ಮಿಸಲಾಗಿದೆ. ಎ.20 ರಂದು ಅಪರಾಹ್ನ 4 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಘಾಟನೆ ನೆರವೇರಿಸುವರು.

ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸುವರು. ಡಾ| ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಸುರೇಂದ್ರ ಕುಮಾರ್‌ ಶುಭಾಶಂಸನೆ ಮಾಡುವರು. ಶಾಸಕ ಹರೀಶ್‌ ಪೂಂಜ, ಮತ್ತು ವಿಧಾನ ಪರಿಷತ್‌ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್‌ ಹಾಗೂ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು