Wednesday, September 16, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕು ನಡ ಗ್ರಾಮದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ವಿರತಣೆ -ಕಹಳೆ ನ್ಯೂಸ್

ಬೆಳ್ತಂಗಡಿ :ಮೇ 4 ರಂದು ನಡ ಗ್ರಾಮದ ನರಸಿಂಹ ಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣದ ಆಮಂತ್ರಣ ಪತ್ರಿಕೆಯನ್ನು ತಾಲೂಕಿನ ಪ್ರಮುಖರಿಗೆ ವಿತರಿಸಲಾಯಿತು.

ಜಾಹೀರಾತು

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವನ್ನು ಬಹಳ ವಿಜ್ರಂಬಣೆಯಿಂದ ನಡೆಸುವ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸಲಾಯಿತು ಮೇ 3 ಹಾಗು 4 ರಂದು ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದ್ದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಬೇಕಾಗಿ ವಿನಂತಿ. ಕಲ್ಯಾಣೋತ್ಸವವು ಮಾನ್ಯ ಶಾಸಕರು ಹಾಗೂ ಕಲ್ಯಾಣೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ಜರುಗಲಿದೆ. ಈ ಸಂದರ್ಭದಲ್ಲಿ ಕಲ್ಯಾಣೋತ್ಸವ ಸಮಿತಿಯ ಗೌರವ ಸಲಹೆಗಾರರಾದ ಶ್ರೀ ಶಶಿಧರ್ ಶೆಟ್ಟಿ ಬರೋಡ ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಪೂಂಜ ಸಮಿತಿಯ ಕೋಶಾಧ್ಯಕ್ಷರುಗಳಾದ ಪುರುಷೋತ್ತಮ ಶೆಣೈ, ಚಂದ್ರಶೇಖರ ಬೋಜಾರ ಉಪಾಧ್ಯಕ್ಷರಾದ ಅಜಿತ್ ಆರಿಗ ಹಾಗೂ ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ,ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀ ನವೀನ್ ನೆರಿಯ ಇವರುಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು