Wednesday, March 11, 2026
ಸುದ್ದಿ

ಪಹಲ್ಗಾಮ್ ದಾಳಿಗೆ ಪ್ರತೀಕಾರ : ಬಾರಾಮುಲ್ಲಾದಲ್ಲಿ ಇಬ್ಬರು ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ.! ಕಹಳೆ ನ್ಯೂಸ್

ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆಯ ಯೋಧರು ಇಬ್ಬರು ಪಾಕ್ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಗುಂಡಿನ ಚಕಮಕಿಯ ನಂತರ ಸೇನೆಯು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.. ಈ ಕಾರ್ಯಾಚರಣೆಯು ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಯಶಸ್ವಿಯಾಗಿ ವಿಫಲಗೊಳಿಸಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಚಿನಾರ್ ಪೊಲೀಸ್-ಇಂಡಿಯನ್ ಆರ್ಮಿ ಎಕ್ಸ್ ಹ್ಯಾಂಡಲ್ ಪೋಸ್ಟ್ನಲ್ಲಿ ಕಾರ್ಯಾಚರಣೆಯನ್ನು ದೃಢಪಡಿಸಿದೆ. “ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರಿ ಗುಂಡಿನ ಚಕಮಕಿ, ಇಬ್ಬರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ, ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ. ಭಯೋತ್ಪಾದಕರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದಿದೆ.

ಜಾಹೀರಾತು
ಜಾಹೀರಾತು

ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಸ್ಥಳೀಯ ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ ಈ ಹತ್ಯಾಕಾಂಡದ ಹೊಣೆ ಹೊತ್ತಿದೆ.