Recent Posts

Sunday, April 26, 2026
ದೆಹಲಿರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಸರ್ಕಾರ -ಕಹಳೆ ನ್ಯೂಸ್

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಘೋಷಣೆ ಮಾಡಿದೆ.

ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

‘ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು ಹಾಗೂ ಅತೀವ ದುಃಖಿತನಾಗಿದ್ದೇನೆ.

ಅಮಾಯಕ ನಾಗರಿಕರ ವಿರುದ್ಧದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ನನ್ನ ಸಂತಾಪಗಳು’ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅದೇ ವೇಳೆ ಭಯೋತ್ಪಾದಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ₹2 ಲಕ್ಷ ಹಾಗೂ ಸಣ್ಣಪುಟ್ಟ ಗಾಯವಾದವರಿಗೆ ₹1 ಲಕ್ಷ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ.

‘ಮೃತರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕಳುಹಿಸಲು ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ಕುಟುಂಬದ ದುಃಖದೊಂದಿಗೆ ನಾವು ಭಾಗಿಯಾಗುತ್ತೇವೆ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ ಇಬ್ಬರು ವಿದೇಶಿಯರು ಹಾಗೂ ಇಬ್ಬರು ಸ್ಥಳೀಯರು ಸೇರಿದ್ದಾರೆ.