Saturday, March 14, 2026
ಬೆಂಗಳೂರುಸುದ್ದಿ

ಭರತ್ ಭೂಷಣ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದ ರಾಜ್ಯಪಾಲರು-ಕಹಳೆ ನ್ಯೂಸ್

ಬೆಂಗಳೂರು: ಜಮ್ಮು-ಕಾಸ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಕನ್ನಡಿಗರು ಸೇರಿ 28 ಜನರು ಬಲಿಯಾಗಿದ್ದು, ಕನ್ನಡಿಗರ ಮೃತದೇಹ ರಾಜ್ಯಕ್ಕೆ ಆಗಮಿಸಿದೆ. ಕಾಶ್ಮೀರದಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗಿರುವ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ರಾಜ್ಯಪಾಲರು ಪಡೆದಿದ್ದಾರೆ.

ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ನಿವಾಸದಲ್ಲಿ ಭರತ್ ಭೂಷಣ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಭರತ್ ಭೂಷಣ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಭರತ್ ಪತ್ನಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಕೆಲಕಾಲ ಅವರೊಂದಿಗೆ ಚರ್ಚೆ ನಡೆಸಿದರು.

ಜಾಹೀರಾತು
ಜಾಹೀರಾತು