Friday, March 13, 2026
ಕೊಡಗುಸುದ್ದಿ

ಕೊಡಗು: ಪಾಲಿಬೆಟ್ಟ ಸಮೀಪ ಕಾಡಾನೆ ದಾಳಿಗೆ ವ್ಯಕ್ತಿ ಸಾವು-ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿ ಎಸ್ಟೇಟ್‌ನಲ್ಲಿ ಗುರುವಾರ ಬೆಳಿಗ್ಗೆ ಕಾಡಾನೆ ದಾಳಿಗೆ ಸಿಲುಕಿ ಚೆಲ್ಲ (65) ಎಂಬುವವರು ಮೃತಪಟ್ಟಿದ್ದಾರೆ.

ಕಾಫಿ ತೋಟದ ನಿವೃತ್ತ ಸೂಪರ್ ವೈಸರ್ ಆಗಿದ್ದ ಅವರು ವಾಯುವಿಹಾರಕ್ಕೆ ತೆರಳಿದ್ದ ವೇಳೆ ಬೆಳಿಗ್ಗೆ 6.30ರ ಸಮಯದಲ್ಲಿ ಕಾಡಾನೆಯೊಂದು ದಾಳಿ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದ ತೀವ್ರವಾಗಿ ಗಾಯಗೊಂಡ ಚೆಲ್ಲ ಸ್ಥಳದಲ್ಲೇ ಮೃತಪಟ್ಟರು.

ಜಾಹೀರಾತು
ಜಾಹೀರಾತು

ಅರಣ್ಯ‌ಇಲಾಖೆ ಸಿಬ್ಬಂದಿ ಕಾಡಾನೆಗಾಗಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಗಂಗಾಧರ, ಉಪ ವಲಯ ಅರಣ್ಯಾಧಿಕಾರಿ ಶಶಿ ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.