ಇಸ್ರೋ ಮಾಜಿ ಅಧ್ಯಕ್ಷ, ಪದ್ಮ ವಿಭೂಷಣ ಪುರಸ್ಕೃತ ಡಾ.ಕೆ. ಕಸ್ತೂರಿರಂಗನ್ ವಿಧಿವಶ-ಕಹಳೆ ನ್ಯೂಸ್

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್(84ವರ್ಷ) ಅವರು ಶುಕ್ರವಾರ (ಏ.25) ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ.
ಡಾ.ಕೆ.ಕಸ್ತೂರಿರಂಗನ್ ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಸುದೀರ್ಘ 9ವರ್ಷಕ್ಕೂ ಅಧಿಕ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು ಇಬ್ಬರು ಪುತ್ರರು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.
1940 ಅಕ್ಟೋಬರ್ 24ರಂದು ಎರ್ನಾಕುಳಂನಲ್ಲಿ ಜನಿಸಿದ್ದರು. ಕಸ್ತೂರಿ ರಂಗನ್ ಪೂರ್ವಜರು ತಮಿಳುನಾಡಿನಿಂದ ಕೇರಳದ ವಿವಿಧ ಪ್ರದೇಶಕ್ಕೆ ವಲಸೆ ಬಂದು ವಾಸ್ತವ್ಯ ಹೂಡಿದ್ದರು.














