
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತ ಮತ್ತು ಪಾಕಿಸ್ತಾನ ನಡುವೆ ಬಹಳ ಉದ್ವಿಗ್ನ ಪರಿಸ್ಥಿತಿ ಇದೆ. ಅಲ್ಲದೆ, ಉಭಯ ದೇಶಗಳ ನಡುವಿನ ಕ್ರಿಕೆಟ್ ಸಂಬಂಧಗಳ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ಸಂಬಂಧಗಳನ್ನು ಮುರಿಯಬೇಕು ಎಂದು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಒತ್ತಾಯಿಸಿದರು.
ಈಗ, ಗಡಿಯಾಚೆಗಿನ ಪಾಕಿಸ್ತಾನ ಮಹಿಳಾ ಆಟಗಾರ್ತಿಯೊಬ್ಬರು ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಗುಲ್ ಫಿರೋಜಾ ತಮ್ಮ ವಿವಾದಾತ್ಮಕ ಹೇಳಿಕೆಯಿಂದ ಸಂಚಲನ ಸೃಷ್ಟಿಸಿದ್ದಾರೆ. ಗುಲ್ ಫಿರೋಜಾ ಭಾರತದಲ್ಲಿ ಕ್ರಿಕೆಟ್ ಆಡಲು ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.
ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್ 2025 ರ ಟೂರ್ನಿಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಗುಲ್ ಫಿರೋಜಾ ಹೇಳಿದ್ದಾರೆ. ಪಾಕಿಸ್ತಾನ ಇತ್ತೀಚೆಗೆ ಮಹಿಳಾ ಕ್ರಿಕೆಟ್ ವಿಶ್ವಕಪ್ 2025ಕ್ಕೆ ಅರ್ಹತೆ ಪಡೆದಿದೆ. ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯದಲ್ಲಿ ಪಾಕಿಸ್ತಾನ ಗುಲ್ ಫಿರೋಜಾ ಆರಂಭಿಕ ಬ್ಯಾಟರ್ ಆಗಿ 3 ಏಕದಿನ ಪಂದ್ಯಗಳನ್ನು ಆಡಿದರು.
ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ರಲ್ಲಿ ಪಾಕಿಸ್ತಾನ ಪ್ರವೇಶಿಸಿದ ನಂತರ, ಈ ಟೂರ್ನಿ ಹೈಬ್ರಿಡ್ ಮಾದರಿಯಲ್ಲಿ ನಡೆಯುವ ಸಾಧ್ಯತೆಯೂ ಹೆಚ್ಚಾಗಿದೆ. ಭಾರತವು 2025 ರ ಮಹಿಳಾ ಕ್ರಿಕೆಟ್ ವಿಶ್ವಕಪ್ ಅನ್ನು ಆಯೋಜಿಸಲಿದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನದ ಪಂದ್ಯಗಳನ್ನು ಭಾರತದ ಹೊರಗಿನ ಯಾವುದಾದರೂ ತಟಸ್ಥ ಸ್ಥಳದಲ್ಲಿ ಆಯೋಜಿಸಬಹುದು.
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಈಗಾಗಲೇ ಪಾಕಿಸ್ತಾನ ತಂಡ 2025 ರ ಮಹಿಳಾ ಕ್ರಿಕೆಟ್ ವಿಶ್ವಕಪ್‌ಗಾಗಿ ಭಾರತಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ. ಈಗ ಗುಲ್ ಫಿರೋಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, “ನಾವು ಏಷ್ಯಾದ ಪರಿಸ್ಥಿತಿಗಳಲ್ಲಿ ಆಡುತ್ತೇವೆ. ನಾವು ಭಾರತದಲ್ಲಿ ಆಡುತ್ತಿಲ್ಲ ಎಂದು ನಮಗೆ ತಿಳಿದಿದೆ, ಇದು ಸ್ಪಷ್ಟವಾಗಿದೆ. ಭಾರತದಲ್ಲಿ ಆಡಲು ನಮಗೆ ಆಸಕ್ತಿಯೂ ಇಲ್ಲ ಎಂದು ಹೇಳಿದ್ದಾರೆ.
ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ರ ಎಲ್ಲೆಲ್ಲಿ ನಡೆದರೂ, ಅಲ್ಲಿನ ಪರಿಸ್ಥಿತಿಗಳು ತವರು ಮೈದಾನದಂತೆಯೇ ಇರುತ್ತವೆ. ಅದು ಶ್ರೀಲಂಕಾ ಆಗಿರಲಿ ಅಥವಾ ದುಬೈ ಆಗಿರಲಿ, ಅಲ್ಲಿನ ಪರಿಸ್ಥಿತಿಗಳು ಏಷ್ಯಾದಂತೆಯೇ ಇರುತ್ತದೆ ಅಂದುಕೊಂಡಿದ್ದೇವೆ. ಆದ್ದರಿಂದ, ನಮ್ಮ ಸಿದ್ಧತೆ ಅದಕ್ಕೆ ತಕ್ಕಂತೆ ಇರುತ್ತದೆ ಮತ್ತು ನಾವು ಅದಕ್ಕೆ ಸಿದ್ಧರಿದ್ದೇವೆ ಎಂದು ಗುಲ್ ಫಿರೋಜಾ ತಿಳಿಸಿದ್ದಾರೆ.














