Thursday, March 12, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಿಎಂ ಸಿದ್ದರಾಮಯ್ಯ ಹೇಳಿಕೆ ದೇಶಕ್ಕೆ ಮಾಡಿದ ಅಪಮಾನ: ಕ್ಯಾ.ಬ್ರಿಜೇಶ್‌ ಚೌಟ -ಕಹಳೆ ನ್ಯೂಸ್

ಮಂಗಳೂರು: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ರಣಹೇಡಿ ಭಯೋತ್ಪಾದಕ ದಾಳಿಯ ವಿರುದ್ದ ದೇಶವೇ ಒಗ್ಗಟ್ಟಿನಿಂದ ನಿಂತಿರುವಾಗ ಸಾರ್ವಜನಿಕ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಸಂವೇದನೆ ರಹಿತರಂತೆ, ಬೇಜವಾಬ್ದಾರಿಯುತ, ಬಾಲಿಶ ಮತ್ತು ರಾಜಕೀಯ ಅಭದ್ರತೆಯಿಂದ ಕೂಡಿದ ಹೇಳಿಕೆ ನೀಡಿರುವುದು ನಿಜಕ್ಕೂ ವಿಷಾದನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಪಾಕಿಸ್ಥಾನದ ಜತೆ ಯುದ್ಧ ಸಾರುವ ಅಗತ್ಯ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡನೀಯ. ಪಹಲ್ಗಾಮ್‌ನಲ್ಲಿ ನಡೆದ ಘಟನೆ ನಮ್ಮ ರಾಷ್ಟ್ರದ ಮೇಲೆ ನಡೆದ ಹೇಡಿತನದ ದಾಳಿ. ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡು “ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವವರನ್ನು ಶಿಕ್ಷಿಸುವುದು ಬೇಡ ನಮ್ಮ ಭದ್ರತೆಯನ್ನು ಬಲಪಡಿಸಿ’ ಎಂಬ ರೀತಿಯ ಹೇಳಿಕೆ ನೀಡಿರುವುದು ಅಕ್ಷಮ್ಯ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂತಹ ಹೇಳಿಕೆಗಳು ದಾಳಿಯಲ್ಲಿ ಹುತಾತ್ಮರಾದ ನಮ್ಮ ಭದ್ರತಾ ಸಿಬಂದಿಯ ಶೌರ್ಯ ಮತ್ತು ಬಲಿದಾನ ಕಡೆಗಣಿಸಿದಂತಾಗುತ್ತದೆ. ಪುಲ್ವಾಮವಿರಲಿ ಪಹಲ್ಗಾಮ್‌ ಆಗಿರಲಿ ಈ ಎರಡೂ ಘಟನೆಗಳನ್ನು ಕೇವಲ ಗುಪ್ತಚರ ವೈಫಲ್ಯಗಳೆಂದು ಸರಳೀಕರಿಸುವುದು ಉಗ್ರರೊಂದಿಗೆ ಕೆಚ್ಚೆದೆಯಲ್ಲಿ ಹೋರಾಡಿ ಹುತಾತ್ಮರಾದ ಯೋಧರ ತ್ಯಾಗ ಅತ್ಯಲ್ಪವೆಂದು ಪರಿಗಣಿಸಿ ಅವರ ಸರ್ವೋಚ್ಚ ಬಲಿದಾನಕ್ಕೆ ನೀಡುವ ಅಗೌರವ ಹಾಗೂ ಭಾರತೀಯ ಸೈನಿಕರ ನೈತಿಕ ಸ್ಥೈರ್ಯ ಕುಗ್ಗಿಸಲು ನಡೆಯುತ್ತಿರುವ ಷಡ್ಯಂತ್ರ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು