Friday, April 24, 2026
ಬೆಂಗಳೂರುಸುದ್ದಿ

ಗೃಹ ಲಕ್ಷ್ಮೀ ಯೋಜನೆ.. ಮೂರು ಕಂತಿನ ಹಣ ಒಟ್ಟಿಗೆ ಜಮೆ- ಲಕ್ಷ್ಮೀ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಕಾಂಗ್ರೆಸ್​ ಸರ್ಕಾರದ ಗೃಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ಎರಡು ಸಾವಿರ ರೂಪಾಯಿ ವರ್ಗಾವಣೆ ಮಾಡಲಾಗುತ್ತದೆ. ಆದರೆ ಕೆಲ ತಿಂಗಳಿನಿಂದ ಈ ಹಣವು ಜಮೆಯಾಗದ ಕಾರಣ ಸರ್ಕಾರ ಫಲಾನುಭವಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಈ ಹಿನ್ನೆಲೆಯಲ್ಲಿ ಬಾಕಿ ಇರುವ ಮೂರು ಕಂತಿನಿ ಹಣವನ್ನು ಒಟ್ಟಿಗೆ ಹಾಕಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರು ತಿಳಿಸಿದ್ದಾರೆ. ಮೇ ತಿಂಗಳಲ್ಲಿ ಜನವರಿ, ಫೆಬ್ರವರಿ ಹಾಗೂ ಮಾರ್ಚ್​​ ತಿಂಗಳ ಮೂರು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಮೂರು ತಿಂಗಳ ಹಣ ಬಿಡುಗಡೆಯಾಗುವುದು ಗ್ಯಾರಂಟಿ. ಇನ್ನೊಂದು ವಾರದಲ್ಲಿ ಒಂದು ತಿಂಗಳ ಹಣ, ಮತ್ತೊಂದು ವಾರದಲ್ಲಿ ಇನ್ನೊಂದು ತಿಂಗಳ ಹಣವನ್ನು ಹೀಗೆ ಮೇ ತಿಂಗಳಲ್ಲಿ ಒಟ್ಟು ಮೂರೂ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ ಎಂದು ಸಚಿವೆಯವರು ನಿನ್ನೆಯೂ ಸ್ಪಷ್ಟಪಡಿಸಿದ್ದರು.