Friday, March 6, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನವೀಕೃತ ಮಳಿಗೆಯ ಅನಾವರಣದ ಪ್ರಯುಕ್ತ ಮೆ.01ರಂದು ಕಾರ್ಮಿಕರ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು : ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನವೀಕೃತ ಮಳಿಗೆಯ ಅನಾವರಣದ ಪ್ರಯುಕ್ತ ಸ್ವಚ್ಚ ಪುತ್ತೂರು ಕಾರ್ಯಕ್ರಮದ ಅಂಗವಾಗಿ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವು ಮೆ.01ರಂದು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಸಭಾಂಗಣದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಹಾಗೂ ನಗರ ಸಭೆ ಸಿಬ್ಬಂದಿಗಳಿಗೆ ಅಧಿಕಾರಿಗಳು ಮತ್ತು ಸರ್ವ ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಜರಗಲಿದ್ದು, ಸ್ವಚ್ಚ ಪುತ್ತೂರು ಯೋಜನೆಯಲ್ಲಿ ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಸಂಸ್ಥೆಯು ಪ್ರಮುಖ ಪಾತ್ರ ವಹಿಸಿರುವುದರಿಂದ, ಈ ಯೋಜನೆಯ ಭಾಗಿದಾರರು ಎಂಬ ನೆಲೆಯಲ್ಲಿ ನಗರಸಭೆಗೆ ಸಂಬಂಧಿಸಿರವರನ್ನು ಗೌರವಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಎಂದು ಮುಳಿಯ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೇಶವ ಪ್ರಸಾದ್ ಮುಳಿಯ ಮತ್ತು ಕೃಷ್ಣ ನಾರಾಯಣ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು