Wednesday, June 10, 2026
ಚಿತ್ರದುರ್ಗಸಂತಾಪಸುದ್ದಿ

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : ಚಲಿಸುತ್ತಿದ್ದ ಇನ್ನೋವಾ ಕಾರಿನ ಟಯರ್ ಸ್ಫೋಟಗೊಂಡು ತಮಿಳುನಾಡು ಮೂಲದ ಮೂವರು ಸ್ಥಳದಲ್ಲೇ ಮೃ*ತ್ಯು- ಕಹಳೆ ನ್ಯೂಸ್

ಚಿತ್ರದುರ್ಗ: ಚಲಿಸುತ್ತಿದ್ದ ಇನ್ನೋವಾ ಕಾರಿನ ಟಯರ್ ಸ್ಫೋಟಗೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಹೊರವಲಯದ ಸೀಬಾರದ ಗೋಶಾಲೆ ಬಳಿ ಸಂಭವಿಸಿದೆ.

ಜಾಹೀರಾತು

ಮೃತರನ್ನು ತಮಿಳುನಾಡು ಮೂಲದ ಅರ್ಜುನ್ (28) , ಸರವಣ್ (30) , ಶ್ರೀಧರ್ (30) ಎನ್ನಲಾಗಿದೆ. ಮೃತ ಅರ್ಜುನ್ ತಮಿಳುನಾಡು ಮೂಲದ ಪೊಲೀಸ್ ಪೇದೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರಿನಲ್ಲಿದ್ದವರು ತಮಿಳುನಾಡಿನ ಕೃಷ್ಣಗಿರಿ ಮೂಲದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ 6 ಮಂದಿ ಗಾಯಾಳುಗಳ ಪೈಕಿ 3 ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ತಮಿಳುನಾಡಿನ ಕೃಷ್ಣಗಿರಿಯಿಂದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.