Tuesday, March 10, 2026
ಜಿಲ್ಲೆಶಿಕ್ಷಣಸುದ್ದಿ

ನಾಳೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ-ಕಹಳೆ ನ್ಯೂಸ್

ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶವನ್ನು ನಾಳೆ (ಮೇ,02) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಕಟ ಮಾಡಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆಯನ್ನು ನಡೆಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕದಾದ್ಯಂತ 15,881 ಪ್ರೌಢಶಾಲೆಗಳಿಂದ 4,61,563 ಹುಡುಗರು ಮತ್ತು 4,34,884 ಹುಡುಗಿಯರು ಪರೀಕ್ಷೆಗೆ ದಾಖಲಾಗಿದ್ದರು. ಪ್ರಸ್ತುತ ಎಲ್ಲ ವಿಷಯಗಳ ಪರೀಕ್ಷೆಗಳು ಮುಗಿದ ಬಳಿಕ, ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಇದೀಗ ಇದರ ಫಲಿತಾಂಶ ನಾಳೆ ಹೊರ ಬೀಳಲಿದೆ.
ವಿದ್ಯಾರ್ಥಿಗಳು ತಮ್ಮ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ KSEAB ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಲಭ್ಯವಿರುವ ಫಲಿತಾಂಶಗಳನ್ನು ಪರಿಶೀಲಿಸಬಹುದು.

ಜಾಹೀರಾತು
ಜಾಹೀರಾತು

ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 8.9 ಲಕ್ಷ ವಿದ್ಯಾರ್ಥಿಗಳು ಕರ್ನಾಟಕ ಮಂಡಳಿಯ 10 ನೇ ತರಗತಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅವರಲ್ಲಿ 4.5 ಲಕ್ಷ ಹುಡುಗರು ಮತ್ತು 4.3 ಲಕ್ಷ ಹುಡುಗಿಯರು ವಾರ್ಷಿಕ ಮಂಡಳಿ ಪರೀಕ್ಷೆಗಳಲ್ಲಿ ಭಾಗವಹಿಸಿದ್ದರು. ಒಟ್ಟಾರೆ ಉತ್ತೀರ್ಣ ಶೇಕಡಾವಾರು 73.40 ರಷ್ಟಿತ್ತು, ಇದು 2023 ರಲ್ಲಿ 83.89 ಪ್ರತಿಶತ ಮತ್ತು 2022 ರಲ್ಲಿ 85.13 ಪ್ರತಿಶತದಿಂದ ಕಡಿಮೆಯಾಗಿದೆ.