Tuesday, March 10, 2026
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಎಂಬಿಬಿಎಸ್‌ ವಿದ್ಯಾರ್ಥಿನಿಯೊಂದಿಗೆ ಡೆಲಿವರಿ ಬಾಯ್‌ ಲವ್‌ – ಕಿಡ್ನಾಪ್‌ ಮಾಡಿ ಹತ್ಯೆ!-ಕಹಳೆ ನ್ಯೂಸ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇತ್ತೀಚಿಗೆ ಕ್ರೈo ರೇಟ್ ಜಾಸ್ತಿಯಾಗ್ತಿದೆ. ಕಿಡ್ನಾಪ್ ಅಂಡ್ ಮರ್ಡರ್ ಕೇಸ್ ಹೆಚ್ಚು ಭೀತಿ ಸೃಷ್ಟಿಸುತ್ತಿದೆ.

ಬೆಂಗಳೂರಿನ ನೀರುಗುಂಟೆಪಾಳ್ಯದಲ್ಲಿ ದುಷ್ಕರ್ಮಿಗಳು ಕಾರಿನಲ್ಲಿ ಕಿಟ್ರ್ಯಾಪ್ ಮಾಡಿ ಯುವಕನ ಬರ್ಬರ ಕೊಲೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನೀರುಗುಂಟೆಪಾಳ್ಯದಲ್ಲಿ ಯುವಕನನ್ನು ಕಾರಿನಲ್ಲಿ ಅಪಹರಣ ಮಾಡಿ ಹತ್ಯೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು

ಯುವಕನನ್ನು ನಿರುಗುಂಟೆಪಾಳ್ಯದ ಪ್ರೀತಂ (19) ಎಂದು ಗುರುತಿಸಲಾಗಿದೆ. ಪ್ರೀತಂ ತನಗಿಂದ 2 ವರ್ಷ ದೊಡ್ಡವಳಾದ ಯುವತಿಯನ್ನು ಪ್ರೀತಿಸುತ್ತಿದ್ದ, ಯುವತಿ MBBS ಓದುತ್ತಿದ್ದಳು. ಪ್ರೀತಂ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಈತನ ಪ್ರೀತಿಯ ವಿಷಯ ತಿಳಿದ ಯುವತಿಯ ಸಂಬಂಧಿಕರು ಎರಡು ಬಾರಿ ವಾರ್ನಿಂಗ್‌ ನೀಡಿದ್ದರು. ಆದರೆ ಈತ ತನ್ನ ಪ್ರೀತಿಯನ್ನು ಮುಂದುವರೆಸಿದ್ದ. ಇದರಿಂದ ಕುಪಿತಗೊಂಡ ಯುವತಿಯ ಚಿಕ್ಕಮ್ಮನ ಮಗ ಶ್ರೀಕಾಂತ್‌ ತನ್ನ ಸ್ನೇಹಿತರೊಂದಿಗೆ ಕಂಠ ಪೂರ್ತಿ ಕುಡಿದು, ಪ್ರೀತಂನನ್ನು ಅಪಹರಿಸಿ ಹಲ್ಲೆಗೈದು ಹತ್ಯೆ ನಡೆಸಿದ್ದಾನೆ.

ಪ್ರೀತಂ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ನ್ಯಾಯ ಕೊಡಿಸುವಂತೆ ಪೊಲೀಸರ ಬಳಿ ಮೊರೆಯಿಟ್ಟಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.