ಕುದ್ರೋಳಿ ಬಳಿ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ – ಕಟ್ಟಡದಲ್ಲಿ ಸಿಲುಕಿದ್ದ ಅಸ್ವಸ್ಥ ವೃದ್ಧರೊಬ್ಬರನ್ನು ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಗರದ ಕುದ್ರೋಳಿ ಬಳಿ ಮಂಗಳವಾರ(ಮೇ.6) ರಂದು ಸಂಭವಿಸಿದೆ.
ಇಲ್ಲಿನ ಕಟ್ಟಡದ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ದಟ್ಟ ಹೊಗೆ ಆವರಿಸಿಕೊಂಡಿದೆ, ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ತಂಡ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಅಲ್ಲದೆ ಮಹಡಿ ತುಂಬಾ ಹೊಗೆ ಆವರಿಸಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ.
ಈ ನಡುವೆಯೂ ಕಟ್ಟಡದಲ್ಲಿ ಸಿಲುಕಿದ್ದ ಅಸ್ವಸ್ಥ ವೃದ್ಧರೊಬ್ಬರನ್ನು ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.














