Wednesday, March 11, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಹಿರಿಯ ಕವಿ ಪ್ರೊ. ಜಿ ಎಸ್ ಸಿದ್ದಲಿಂಗಯ್ಯ ನಿಧನ-ಕಹಳೆ ನ್ಯೂಸ್

ಬೆಂಗಳೂರು: ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ(94) ಅವರು ವಯೋಸಹಜ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಿಗೆ ಪತ್ನಿ ಇದ್ದಾರೆ. ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಇಂದು(ಬುಧವಾರ) ಮಧ್ಯಾಹ್ನ 3 ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ‌.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರಿಗೆ ಪತ್ನಿ ಇದ್ದಾರೆ. ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಇಂದು(ಬುಧವಾರ) ಮಧ್ಯಾಹ್ನ 3 ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ‌.

ಜಾಹೀರಾತು
ಜಾಹೀರಾತು

ತುಮಕೂರು ಜಿಲ್ಲೆ ಬೆಳ್ಳಾವಿಯ ಸಿದ್ದಲಿಂಗಯ್ಯ ಅವರು ಜನಿಸಿದ್ದು 1931ರಲ್ಲಿ. ಕಾಲೇಜು ಶಿಕ್ಷಣದವರೆಗಿನ ವಿದ್ಯಭ್ಯಾಸವನ್ನೆಲ್ಲ ಊರಿನಲ್ಲಿ ಪೂರೈಸಿದರು. ನಂತರ ಬಿಎ(ಆನರ್ಸ್), ಎಂ.ಎ ಕನ್ನಡದಲ್ಲಿ‌ ಮೊದಲ ದರ್ಜೆಯಲ್ಲಿ ಉತ್ತೀರ್ಣರಾದರು. ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಉದ್ಯೋಗ ಆರಂಭಿಸಿದರು. ಮುಂದೆ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

ಸಾಹಿತಿ, ಕವಿ ಹಾಗೂ‌ ವಿಮರ್ಶಕರಾಗಿದ್ದ ಸಿದ್ದಲಿಂಗಯ್ಯನವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು.

ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.