ಮಂಗಳೂರು: ಪಾಕ್ ವಿರುದ್ಧ ಸಮರ- ಸೈನಿಕರಿಗೆ ಬಲ ತುಂಬಲು ಕದ್ರಿ, ಕುದ್ರೋಳಿಯಲ್ಲಿ ವಿಶೇಷ ಪೂಜೆ-ಕಹಳೆ ನ್ಯೂಸ್

ಮಂಗಳೂರು: ಪಾಕ್ ವಿರುದ್ಧ ಸಮರ ಸಾರಿರುವ ಭಾರತೀಯ ಯೋಧರಿಗೆ ಬಲ ತುಂಬಲು ನಗರದ ಕದ್ರಿ ಹಾಗೂ ಕುದ್ರೋಳಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.
ರಾಜ್ಯವಸರ್ಕಾರದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಬೇಕು. ಭಾರತೀಯ ಸೇನೆಗೆ ಒಳಿತಾಗಲಿ, ಸೇನೆಯ ಯೋಧರಿಗೆ ಮತ್ತಷ್ಟು ಶಕ್ತಿಗಾಗಿ ಪ್ರಾರ್ಥಿಸಿ ವಿಶೇಷ ಸಂಕಲ್ಪ ಮಾಡಿ, ಭಗವಂತನ ಪೂಜೆ ಮಾಡಬೇಕೆಂದು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ನಿರ್ದೇಶನದ ಮೇರೆಗೆ ಮುಜರಾಯಿ ಇಲಾಖೆ ಈ ಸುತ್ತೋಲೆ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಗೆ ಒಳಪಟ್ಟ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ ನಡೆಯಿತು. ಕದ್ರಿ ದೇವಾಲಯದ ಆಡಳಿತ ಮಂಡಳಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು. ಮುಜರಾಯಿ ಇಲಾಖೆಗೆ ಒಳಪಡದಿದ್ದರೂ, ಶ್ರೀಕ್ಷೇತ್ರ ಕುದ್ರೋಳಿಯಲ್ಲೂ ವಿಶೇಷ ಪೂಜೆ ನಡೆಯಿತು. ಶ್ರೀಗೋಕರ್ಣನಾಥ ದೇವರಿಗೆ ಸೀಯಾಳಭಿಷೇಕವೂ ನೆರವೇರಿತು. ಈ ವೇಳೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು
ಎಂಎಲ್‌ಸಿ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್ ಲೋಬೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಗೇರು ಅಭಿವೃದ್ಧಿ ಇಲಾಖೆಯ ಅಧ್ಯಕ್ಷೆ ಮಮತಾ ಗಟ್ಟಿ, ಕದ್ರಿ ದೇವಸ್ಥಾನದ ಆಡಳಿತ ಅಧ್ಯಕ್ಷ ಎ.ಜೆ.ಶೆಟ್ಟಿ, ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಭಕ್ತರು ಈ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು. ಕುದ್ರೋಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿ









