Sunday, April 26, 2026
ದೆಹಲಿಸುದ್ದಿ

ಪಂಜಾಬ್ ನಲ್ಲಿ ಗಡಿ ದಾಟುತ್ತಿದ್ದ ನುಸುಳುಕೋರ: ಬಿಎಸ್‌ಎಫ್ ನಿಂದ ಗುಂಡಿಕ್ಕಿ ಹತ್ಯೆ-ಕಹಳೆ ನ್ಯೂಸ್

ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುರುವಾರ ಗುಂಡಿಕ್ಕಿ ಕೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ 7-8ರ ಮಧ್ಯರಾತ್ರಿ ಫಿರೋಜ್‌ಪುರ ವಲಯದಲ್ಲಿ ವ್ಯಕ್ತಿಗೆ ಗುಂಡು ಹಾರಿಸಲಾಗಿದೆ.

ಕತ್ತಲೆಯಲ್ಲಿ ಉದ್ದೇಶಪೂರ್ವಕವಾಗಿ ಅಂತರರಾಷ್ಟ್ರೀಯ ಗಡಿಯನ್ನು ದಾಟುತ್ತಿದ್ದಾಗ ಆತ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದು, ಶವವನ್ನು ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಅಪ್ರಚೋದಿತ ಶೆಲ್ ದಾಳಿಯಲ್ಲಿ ತೊಡಗಿದ್ದು, ಗಡಿ ನಿಯಂತ್ರಣ ರೇಖೆ ಮತ್ತು ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಗಳಲ್ಲಿ ಫಿರಂಗಿ ದಾಳಿ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಕ್ಕಳು ಮತ್ತು ಒಬ್ಬರು ಯೋಧರು ಸೇರಿದಂತೆ ಕನಿಷ್ಠ 15 ಜನರು ಮೃತಪಟ್ಟು 43 ಜನರು ಗಾಯಗೊಂಡಿದ್ದಾರೆ.

‘ಆಪರೇಷನ್ ಸಿಂಧೂರ್’: 100 ಉಗ್ರರ ಹತ್ಯೆ, ಪಾಕಿಸ್ತಾನ ದಾಳಿ ಮಾಡಿದರೆ ಸುಮ್ಮನೆ ಬಿಡಲ್ಲ; ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸುತ್ತಿರುವ ಬಗ್ಗೆ ಭಾರತೀಯ ಸೇನೆಯು ಸಮಾನ ಪ್ರಮಾಣದಲ್ಲಿ ಶೆಲ್ ದಾಳಿಗೆ ಪ್ರತಿಕ್ರಿಯಿಸುತ್ತಿದೆ.