ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ನಟ ಉಡುಪಿ ಮೂಲದ ರಾಕೇಶ್ ಪೂಜಾರಿ ನಿಧನ – ಕಹಳೆ ನ್ಯೂಸ್

ಉಡುಪಿ : ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ಮತ್ತು ಚಲನಚಿತ್ರ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಿನ್ನೆ (ಮೇ.11) ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸಂಭವಿಸಿದೆ.

ಮೂಲತಃ ಉಡುಪಿ ನಿವಾಸಿಯಾಗಿರುವ ರಾಕೇಶ್ ಪೂಜಾರಿ, ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ.

ನಟ ರಾಕೇಶ್ ಪೂಜಾರಿ ಪ್ರಸ್ತುತ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್‌ನಲ್ಲಿ ಕಾಣಿಸಿಕೊಂಡಿದ್ದರು. ಕಾಮಿಡಿ ಕಿಲಾಡಿ ವಿನ್ನರ್ ರಾಕೇಶ್ ಪೂಜಾರಿ ಅವರ ನಿಧನದಿಂದ ಎಲ್ಲರಿಗೂ ಗರಬಡಿದಂತೆ ಆಗಿದ್ದು, ಅದೇ ಕಾರ್ಯಕ್ರಮದಲ್ಲಿ ಜಡ್ಜ್ ಆಗಿದ್ದ ನಟಿ ರಕ್ಷಿತಾ ಪ್ರೇಮ್ ಕೂಡ ಸಂತಾಪ ಸೂಚಿಸಿದ್ದಾರೆ.
ಅವರು ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ನಿನ್ನೆಯೇ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂಬ ಮಾಹಿತಿ ಇದೆ.
ಈ ಘಟನೆ ಘಟನೆ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














