
ಬೆಂಗಳೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಗಳನ್ನ ಘೋಚಿಸಿತ್ತು. ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆ ಪ್ರತಿ ಗೃಹಿಣಿಯರಿಗೆ 2000 ರೂಪಾಯಿ ಹಣವನ್ನ ಸರ್ಕಾರ ನೀಡುತ್ತಿದ್ದು, ಇದೀಗ ಬರೋಬ್ಬರಿ ಮೂರು ತಿಂಗಳ ಹಣ ಬ್ಯಾಂಕ್ ಖಾತೆಗೆ ಬಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಗೃಹಲಕ್ಷ್ಮೀಯರು ಗರಂ ಆಗಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿಂದ ಖಾತೆಗೆ ವರ್ಗಾವಣೆಯಾಗದೇ ಇರುವುದರಿಂದ ಗದಗ ಹಾಗೂ ಹುಬ್ಬಳ್ಳಿಯ ಮಹಿಳೆಯರು ರೊಚ್ಚಿಗೆದ್ದಿದ್ದಾರೆ. ಅಲ್ಲದೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ನುಡಿದಂತೆ ನಡೆಯದಿದ್ದರೆ ಮುಂದಿನ ಬಾರಿ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನೂ ಮಹಿಳೆಯರು ನೀಡಿದ್ದಾರೆ.
ಕಳೆದ ಆರು ತಿಂಗಳಿನಿಂದ ಗೃಹ ಲಕ್ಷ್ಮಿ ಹಣ ಸರಿಯಾದ ತಿಂಗಳಲ್ಲಿ ಜಮಾ ಆಗುತ್ತಿಲ್ಲ. ಈ ನಡುವೆ ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಯೋಜನೆಯ ಹಣ ಬಾಕಿ ಉಳಿದಿದ್ದು, ಆದಷ್ಟು ಬೇಗ ಹಂತ ಹಂತವಾಗಿ ಮೇ ತಿಂಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರವಸೆಯನ್ನ ನೀಡಿದ್ದರು. ಆದರೆ ಮೇ 15 ದಿನ ಕಳೆಯುತ್ತಾ ಬಂದರು ಗೃಹ ಲಕ್ಷ್ಮಿಯ ಹಣ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಎಂದು ಮಹಿಳೆಯರು ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.














