
ರಾಯಚೂರು: ನಗರದಲ್ಲಿ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ರವಿವಾರ (ಮೇ 18) ಬೆಳಗಿನ ಜಾವ 4.30ರ ಸುಮಾರಿಗೆ ನಡೆದಿದೆ.
ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ಯುವಕನ ಕೊಲೆ ನಡೆದಿದೆ. ಜಹೀರಾಬಾದ್‌ನ ಬಡಾವಣೆಯ ಸಾದಿಕ್ (27) ಹತ್ಯೆಯಾದ ಯುವಕ.
ಇಡ್ಲಿ ತಿನ್ನಲು ಸಾದಿಕ್ ಮನೆಯಿಂದ ಹೊರಗೆ ಬಂದಿದ್ದ ವೇಳೆ ದಾಳಿ ನಡೆಸಲಾಗಿದೆ.
ಆರೋಪಿ ಕರೀಂ ಎನ್ನುವವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಸಾದಿಕ್ ದೇಹಕ್ಕೆ ಚಾಕುವಿನಿಂದ ಮನಸೊಇಚ್ಛೆ ಚುಚ್ಚಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಾದಿಕ್ನನ್ನು ಆಸ್ಪತ್ರೆಗೆ ಸಾಗಿಸುವಾಗ, ಮಾರ್ಗ ಮಧ್ಯೆ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸದರ್ ಬಜಾರ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಘಟನೆಗೆ ಹಳೇ ವೈಷಮ್ಯವೇ ಕಾರಣ ಇರಬಹುದು ಎಂದು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.














