Saturday, March 14, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು-ತಿರುವನಂತಪುರಂ ನಡುವೆ ವಂದೇ ಭಾರತ್ ಸ್ಲೀಪರ್‌ ರೈಲು ಸಂಚಾರಕ್ಕೆ ತಯಾರಿ -ಕಹಳೆ ನ್ಯೂಸ್

ಬೆಂಗಳೂರು : ಭಾರತೀಯ ರೈಲ್ವೆ ವಂದೇ ಭಾರತ್ ಸ್ಲೀಪರ್ ಮಾದರಿ ರೈಲು ಸಂಚಾರಕ್ಕೆ ತಯಾರಿ ನಡೆಸುತ್ತಿದೆ. ಕರ್ನಾಟಕದಲ್ಲಿ ಹಲವು ಮಾರ್ಗದಲ್ಲಿ ಈ ಮಾದರಿ ರೈಲುಗಳು ಬೇಕು ಎಂಬ ಬೇಡಿಕೆ ಇದೆ. ಮಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರದ ಸೂಚನೆ ಸಿಕ್ಕಿದೆ.

ಈಗ ಬೆಂಗಳೂರು-ತಿರುವನಂತಪುರಂ ಸೆಂಟ್ರಲ್ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರದ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲವು ದಿನಗಳ ಹಿಂದೆ ತಿರುವನಂತಪುರದಲ್ಲಿ ನಡೆದ ಸಂಸದರ ಸಭೆಯಲ್ಲಿ ದಕ್ಷಿಣ ರೈಲ್ವೆಯ ಅಧಿಕಾರಿಗಳು ಬೆಂಗಳೂರು-ತಿರುವನಂತಪುರಂ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರದ ಪ್ರಸ್ತಾವನೆ ಮಂಡಿಸಿದ್ದಾರೆ. ತಿರುವನಂತಪುರ ವಿಭಾಗದಿಂದ ಈ ರೈಲನ್ನು ಓಡಿಸಲು ಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು

ಏರ್ನಾಕುಲಂ-ಬೆಂಗಳೂರು ನಡುವೆ ಸಂಚಾರ ನಡೆಸುತ್ತಿದ್ದ ವಂದೇ ಭಾರತ್ ರೈಲನ್ನು ಕೆಲವು ದಿನಗಳ ಹಿಂದೆ ನಿಲ್ಲಿಸಲಾಗಿದೆ. ಇದನ್ನು ಹಬ್ಬದ ವಿಶೇಷ ರೈಲಾಗಿ ಓಡಿಸಲಾಗುತ್ತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಈ ರೈಲನ್ನು ಪುನಃ ಆರಂಭಿಸಬೇಕು. ಈ ಮಾರ್ಗದ ರೈಲು ಸಂಚಾರಕ್ಕೆ ಬೇಡಿಕೆ ಇದೆ ಎಂದು ಸಂಸದರ ಸಭೆಯಲ್ಲಿ ರೈಲ್ವೆ ಅಧಿಕಾರಿಗಳ ಗಮನ ಸೆಳೆಯಲಾಗಿದೆ.

ಈ ಸಭೆಯಲ್ಲಿಯೇ ತಿರುವನಂತಪುರಂ-ಬೆಂಗಳೂರು ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಬೇಕು. ಇದು ಅತಿ ಹೆಚ್ಚು ಜನಸಂದಣಿಯ ಮಾರ್ಗವಾಗಿದೆ, ಈ ಮಾದರಿ ರೈಲು ಓಡಿಸಿದರೆ ಅದಕ್ಕೆ ಪ್ರಯಾಣಿಕರಿಂದಲೂ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂದು ಚರ್ಚೆಗಳು ನಡೆದಿವೆ. ಆದರೆ ರೈಲ್ವೆ ಇಲಾಖೆ ಇನ್ನೂ ಈ ಮಾರ್ಗಕ್ಕೆ ಒಪ್ಪಿಗೆ ನೀಡಿಲ್ಲ.

ದೇಶದಲ್ಲಿ ವಂದೇ ಭಾರತ್ ರೈಲುಗಳು ಯಶಸ್ವಿಯಾಗಿವೆ. ದೂರದ ನಗರಗಳನ್ನು ಸಂಪರ್ಕಿಸಲು ಭಾರತೀಯ ರೈಲ್ವೆ ವಂದೇ ಭಾರತ್ ಸ್ಲೀಪರ್ ಮಾದರಿ ರೈಲುಗಳನ್ನು ತಯಾರು ಮಾಡುತ್ತಿದೆ. ಈಗಾಗಲೇ ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಮಾರ್ಗದಲ್ಲಿ ಈ ಮಾದರಿ ರೈಲಿನ ಪ್ರಾಯೋಗಿಕ ಸಂಚಾರವನ್ನು ನಡೆಸಲಾಗಿದೆ.

ಪ್ರಸ್ತುತ ದೇಶದ ಯಾವುದೇ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲುಗಳ ಸಂಚಾರ ಆರಂಭಗೊಂಡಿಲ್ಲ. ಹಲವು ರಾಜ್ಯಗಳು ತಮ್ಮ ರಾಜ್ಯಕ್ಕೆ ಈ ಮಾದರಿ ರೈಲುಗಳು ಬೇಕು ಎಂದು ಬೇಡಿಕೆ ಇಟ್ಟಿವೆ. ಕರ್ನಾಟಕದಲ್ಲಿ ಬೆಂಗಳೂರು-ಬೆಳಗಾವಿ, ಮಂಗಳೂರು-ಮುಂಬೈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲುಗಳು ಸಂಚಾರ ನಡೆಸಲಿವೆ ಎಂದು ಅಂದಾಜಿಸಲಾಗಿದೆ.

ಕೇರಳದಲ್ಲಿ ಸದ್ಯ ಎರಡು ವಂದೇ ಭಾರತ್ ರೈಲುಗಳು ಸಂಚಾರವನ್ನು ನಡೆಸುತ್ತಿವೆ. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಎರಡು ರೈಲುಗಳನ್ನು 16 ಬೋಗಿಯ ರೈಲಾಗಿ ಪರಿವರ್ತನೆ ಮಾಡಲಾಗಿದೆ. ಈಗ ವಂದೇ ಭಾರತ್ ಸ್ಲೀಪರ್ ರೈಲನ್ನು ಕೇರಳದ ರಾಜಧಾನಿ ತಿರುವನಂತಪುರಂ ಮತ್ತು ಕರ್ನಾಟದ ರಾಜಧಾನಿ ಬೆಂಗಳೂರು ನಡುವೆ ಓಡಿಸಬೇಕು ಎಂದು ಪ್ರಸ್ತಾವನೆ ಸಲ್ಲಿಸಲಾಗಿದೆ.

ಸಂಸದರ ಸಭೆಯಲ್ಲಿ ಪಾಲಕ್ಕಾಡ್-ತಿರುವನಂತಪುರಂ, ಬೆಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಬೇಕು. ಬೆಂಗಳೂರು-ತಿರುವನಂತಪುರಂ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭಿಸಿದರೆ ಎರಡೂ ರಾಜ್ಯಗಳ ಜನರಿಗೆ ಅನುಕೂಲವಾಗಲಿದೆ ಎಂದು ಚರ್ಚೆಗಳು ನಡೆದಿವೆ. ಈ ಪ್ರಸ್ತಾವನೆಗೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಲಿದೆಯೇ? ಎಂದು ಕಾದು ನೋಡಬೇಕಿದೆ.