Sunday, March 8, 2026
ಬೆಂಗಳೂರುರಾಜ್ಯಸುದ್ದಿ

ವಿದೇಶಿ ಬಾತುಕೋಳಿ ಸಾಕಿದ ಆರೋಪ : ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿಗೆ ಕೋರ್ಟ್’ನಿಂದ ಸಮನ್ಸ್ ಜಾರಿ.! -ಕಹಳೆ ನ್ಯೂಸ್

ಬೆಂಗಳೂರು/ಮೈಸೂರು: ಕಾನೂನು ಬಾಹಿರವಾಗಿ ವಿದೇಶಿ ಬಾತುಕೋಳಿಗಳನ್ನು ಸಾಕಿದ್ದಕ್ಕೆ ನಟ ದರ್ಶನ್‌ ಮತ್ತು ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಾಗಿದ್ದು ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ.

ನಿಷೇಧಿತ ಬಾತುಕೋಳಿಗಳನ್ನ ಕೂಡಿಹಾಕಿದ ಆರೋಪದ ಆಡಿ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್, ವಿಜಯಲಕ್ಷ್ಮಿ, ನಾಗರಾಜ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅಡಿ ಟಿ.ನರಸೀಪುರದ ಸಿವಿಲ್ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.

ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿಯ ವಿಜಯಲಕ್ಷ್ಮೀ ಮಾಲೀಕತ್ವದ ಜಾಗದಲ್ಲಿರುವ ತೂಗುದೀಪ ಫಾರಂ ಹೌಸ್‌ನಲ್ಲಿ ಅಕ್ರಮವಾಗಿ ವಿದೇಶಿ ಬಾತುಕೋಳಿಗಳನ್ನು ಸಾಕಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಕಿಗೆ ಬಂದಿದ್ದು ಹೇಗೆ?
ದರ್ಶನ್‌ ಅವರು ಯೂಟ್ಯೂಬ್‌ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದರು. ಈ ಸಂದರ್ಶನದಲ್ಲಿ ಫಾರಂ ಹೌಸ್‌ನಲ್ಲಿರುವ ಪ್ರಾಣಿ, ಪಕ್ಷಿಗಳ ಬಗ್ಗೆ ವಿವರಿಸಿದ್ದರು. ಮಂಗೋಲಿಯಾ, ರಷ್ಯಾ, ಚೀನಾದಲ್ಲಿ ಕಾಣಿಸಿಕೊಳ್ಳುವ Bar-headed goose ಬಾತುಕೋಳಿಯ ಬಗ್ಗೆ ದರ್ಶನ್‌ ಮಾತನಾಡಿದ್ದರು.

ಜಾಹೀರಾತು
ಜಾಹೀರಾತು

ಸಂದರ್ಶನ ಪ್ರಕಟವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಇದು ಚರ್ಚೆಗೆ ಕಾರಣವಾಗಿತ್ತು. ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಫಾರಂ ಹೌಸ್‌ ಮೇಲೆ ದಾಳಿ ನಡೆಸಿದ್ದರು. ಪ್ರಾಥಮಿಕ ತನಿಖೆ ನಡೆಸಿದ ಬಳಿಕ ವರದಿ ಸಮೇತ ಖಾಸಗಿ ದೂರು ನೀಡಿದ್ದರು.