Saturday, March 7, 2026
ರಾಜ್ಯಸುದ್ದಿ

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ : 10 ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.! – ಕಹಳೆ ನ್ಯೂಸ್

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದು ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಮುಂದಿನ ಮೂರು ದಿನಕ್ಕೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್, ಮೈಸೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಗಾರು ಮಳೆ ಪದಾರ್ಪಣೆಯಾಗಿ ಒಂದೇ ದಿನಕ್ಕೆ ಕರಾವಳಿ, ಮಲೆನಾಡು ಸೇರಿ ಒಳನಾಡಿನ ವಿವಿಧ ಜಿಲ್ಲೆಗಳನ್ನು ಪ್ರವೇಶಿಸಿದ್ದು, ಉತ್ತಮ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜಾಹೀರಾತು
ಜಾಹೀರಾತು

ನಿನ್ನೆ ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಸೇರಿ ಮೊದಲಾದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಮುಂಗಾರು ಮಾರುತಗಳು ಪ್ರಬಲವಾಗಿರುವುದರಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.