ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಾಣಿ ವಲಯದ ಮಾಣಿ ಒಕ್ಕೂಟದ ಸಂಘಗಳ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಾಣಿ ವಲಯದ ಮಾಣಿ ಒಕ್ಕೂಟದ ಸಂಘಗಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸುದೀಪ್ ಕುಮಾರ್ ಶೆಟ್ಟಿಯವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳವು ಸಂಘ ಸಂಘಗಳಿಗೆ ಮಾತ್ರ ಸೀಮಿತವಾಗಿರದೇ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಎಂದರು .ಕರ್ನಾಟಕ ಪ್ರೌಢ ಶಾಲೆಯ ಸಂಚಾಲಕರಾದ ಹಾಜಿ ಇಬ್ರಾಹಿಂ,, ಗ್ರಾಮ ಪಂಚಾಯತ್ ಸದಸ್ಯರಾದ ಮೆಲ್ವಿನ್ ಡಿಸೋಜ, ಕರ್ನಾಟಕ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಚೆನ್ನಪ್ಪ ಗೌಡ, ಯೋಜನಾಧಿಕಾರಿಗಳಾದ ಶ್ರೀ ಸುರೇಶ್ ಗೌಡ,ಮಾಣಿ ವಲಯದ ವಲಯಾಧ್ಯಕ್ಷರಾದ ಶ್ರೀ ಸುಧಾಕರ ಸಪಲ್ಯ ,ಮಾಣಿ ಒಕ್ಕೂಟದ ಅಧ್ಯಕ್ಷರಾದ ಶ್ರೀ ಮಂಜಪ್ಪ ನಾಯ್ಕ , ಉಪಸ್ಥಿತರಿದ್ದರು. ಕಾವೇರಿ, ಶ್ರೀ ಗಣೇಶ ಸಂಘಗಳನ್ನು ಉತ್ತಮ ಸಂಘ ಗಳೆಂದು ಗುರುತಿಸಿ ಅಭಿನಂದಿಸಲಾಯಿತು. sslc ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಗುರುತಿಸಿ ಅಭಿನಂದಿಸಲಾಯಿತು. ನಿಕಟ ಪೂರ್ವ ಅಧ್ಯಕ್ಷರುಗಳನ್ನು ಅಭಿನಂದಿಸಲಾಯಿತು. ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಕಾರ್ಯಕ್ರಮದ ಔಚಿತ್ಯದ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಸೇವಾ ಪ್ರತಿನಿಧಿ ಲಾಯ್ಲಾಬಿ ವರದಿ ಮಂಡಿಸಿ,ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.. ರೇಣುಕಾ ಕಣಿಯೂರು ನಿರೂಪಿಸಿ, ಸುಜಾತಾ ಸ್ವಾಗತಿಸಿದರು ಶಶಿಕಲಾ ವಂದಿಸಿದರು .ಸಂಘದ ಇಬ್ಬರು ಸದಸ್ಯರು ಅನಿಸಿಕೆ ವ್ಯಕ್ತಪಡಿಸಿದರು.









