Wednesday, March 11, 2026
ಸಿನಿಮಾಸುದ್ದಿ

ಸೋನು ನಿಗಮ್​ ಬೆನ್ನಲ್ಲೇ ಕನ್ನಡಿಗರನ್ನು ಕೆರಳಿಸಿದ ಕಮಲ್ ಹಾಸನ್ – ಕಹಳೆ ನ್ಯೂಸ್

ಚೆನ್ನೈ: ಕಾಲಿವುಡ್ ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಜೂನ್ 5ರಂದು ರಿಲೀಸ್‌ಗೆ ಸಿದ್ಧವಾಗಿದೆ. ಇತ್ತೀಚೆಗೆ ಚೆನ್ನೈನಲ್ಲಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು ಈ ವೇಳೆ, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ ಹೇಳಿಕೆ ನೀಡಿ ವಿವಾದದ ಕಿಡಿ ಹೊತ್ತಿಸಿದ್ದಾರೆ.

ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅದು ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಎದುರೇ ಕನ್ನಡ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದೀಗ ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರು ಫುಲ್ ರಾಂಗ್ ಆಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಡಾ| ರಾಜ್‌ಕುಮಾರ್ ಕುಟುಂಬದ ಬಗ್ಗೆ, ಕನ್ನಡಿಗರ ಪ್ರೀತಿಯ ಬಗ್ಗೆ, ಅಭಿಮಾನದ ಬಗ್ಗೆ ಮಾತನಾಡಿದ ಕಮಲ್ ಹಾಸನ್, “ನಿಮ್ಮ ಕನ್ನಡ ನಮ್ಮ ತಮಿಳಿನಿಂದ ಹುಟ್ಟಿದ್ದು’ ಎಂದು ಹೇಳಿದ್ದರು. ಈ ಕುರಿತು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದು ತಮಿಳಿಗರು ಕಮಲ್ ಹಾಸನ್ ಮಾತನ್ನು ಸಮರ್ಥಿಸಿಕೊಂಡರೆ, ಕನ್ನಡಿಗರು ಸಿಟ್ಟಾಗಿದ್ದಾರೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ಕಮಲ್ ಹೇಳಿಕೆ ಬಗ್ಗೆ ಬೇಸರ ಹೊರ ಹಾಕುತ್ತಿದ್ದಾರೆ.

ಜಾಹೀರಾತು
ಜಾಹೀರಾತು