
ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೀಗ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿರುವುದು ಕನ್ನಡಿಗರಿಗೆ ಅಪಾರ ಸಂತಸವನ್ನು ತಂದಿದೆ.
ಭಾರತೀಯ ಚಿತ್ರರಂಗ ಕಂಡ ಅಪರೂಪದ ನಟ, ಕನ್ನಡದ ಹೆಮ್ಮೆ ಅನಂತ್ ನಾಗ್ ಅವರಿಗೆ ಮಂಗಳವಾರ (ಮೇ 27) ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿದರು. ಈ ಗಳಿಗೆಯು ಕೋಟ್ಯಂತರ ಕನ್ನಡಿಗರ ಸಂತಸಕ್ಕೆ ಕಾರಣವಾಗಿದೆ.














