Sunday, March 8, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಕಾಲೇಜನಲ್ಲಿ ರಾಣಿ ಅಬ್ಬಕ್ಕ ಅವರ ೫೦೦ನೇ ಜನ್ಮ ವರ್ಷಾಚರಣೆ ; 100 ಸರಣಿ ಉಪನ್ಯಾಸ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ರಾಣಿ ಅಬ್ಬಕ್ಕ ಅವರ ೫೦೦ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ವತಿಯಿಂದ ಆಯೋಜಿಸಲಾಗುವ ೧೦೦ ಸರಣಿ ಉಪನ್ಯಾಸ ಕಾರ್ಯಕ್ರಮಗಳಲ್ಲಿ ಮೊದಲನೇ ಸರಣಿ ಕಾರ್ಯಕ್ರಮವು KRMS ಸಂಘದ ಮಂಗಳೂರು ವಿಭಾಗ ಮತ್ತು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಹಯೋಗದಲ್ಲಿ ತಾ. 27/05/2025 ರಂದು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ, ಕಲ್ಲಡ್ಕ ಇಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಕುಶಲಾ, ರಾಣಿ ಅಬ್ಬಕ್ಕ ಅವರ ಸಾಧನೆ ಬಗ್ಗೆ ಮಾಹಿತಿ
ನೀಡಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹೆಣ್ಣು
ಅಬಲೆಯಲ್ಲ, ಸಬಲೆ. ದೇಶ ರಕ್ಷಣೆ ಕಾರ್ಯದಲ್ಲಿ ತೊಡಗಿದ ಅಸಂಖ್ಯ ಹೆಣ್ಣು ಮಕ್ಕಳಲ್ಲಿ ರಾಣಿ ಅಬ್ಬಕ್ಕ ಅಗ್ರಸ್ಥಾನದಲ್ಲಿ ನಿಲ್ಲುತ್ತಾಳೆ. ಅವಳು ಎಲ್ಲಾ ಹೆಣ್ಣು ಮಕ್ಕಳಿಗೂ
ಆದರ್ಶಪ್ರಾಯಳು ಎಂದು ನುಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕಿ ಶ್ರೀಮತಿ ಕಾಜಲ್ ಗಣ್ಯರನ್ನು ಸ್ವಾಗತಿಸಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಮಾಧವ ಎಂ ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಏಖಒS ನ ಮಂಗಳೂರು ವಿಭಾಗದ ಅಧ್ಯಕ್ಷರಾದ ಶ್ರೀಮತಿ ವಾಣಿ ಹಾಗೂ ಕಾಲೇಜಿನ ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಥಮ ಬಿಕಾಂ ವಿದ್ಯಾರ್ಥಿ ಲಿಖಿತ್ ವೈಯಕ್ತಿಕ ಗೀತೆ ಹಾಡಿದನು, ಬಿಸಿಎ ವಿದ್ಯಾರ್ಥಿ ಯತೀಶ್ ಆಚಾರ್ಯ ತಬಲದಲ್ಲಿ ಸಹಕರಿಸಿದನು. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಧ್ಯಾಕುಮಾರಿ ಧನ್ಯವಾದ ಸಮರ್ಪಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು