
ಉಡುಪಿ : ಹಲವು ಬೇಡಿಕೆಗಳನ್ನು ಮುಂದಿಟ್ಟು ಪೌರ ಕಾರ್ಮಿಕರು ಅನಿರ್ದಿಷ್ಟಾವಧಿ ಧರಣಿಗೆ ಇಳಿದಿದ್ದಾರೆ. ಉಡುಪಿ ನಗರಸಭೆ ಮುಂಭಾಗ ಇಂದು ಧರಣಿ ಆರಂಭಗೊಂಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು,ವಾಹನ ಚಾಲಕರು, ಸೂಪರ್‌ವೈಸರ್ಸ್, ಕಂಪ್ಯೂಟರ್ ಆಪರೇಟರ್ಸ್ ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ಕಾರ್ಮಿಕರನ್ನು ನೇರ ಪಾವತಿಗೆ ಒಳಪಡಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ, ಈ
ಸಮಾನ ಕೆಲಸಕ್ಕೆ ಸಮಾನ ವೇತನ, ಈ ನೌಕರರನ್ನು ಖಾಯಂ ಮಾಡಬೇಕು….ಹೀಗೆ ಹಲವು ಬೇಡಿಕೆಗಳನ್ನು ನೌಕರರು ಮುಂದಿಟ್ಟಿದ್ದಾರೆ. ಇದಕ್ಕೆ ತಪ್ಪಿದ್ದಲ್ಲಿ ಮುಂದಿನ ದಿನಗಳಲ್ಲಿ ನೀರು ಪೂರೈಕೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದರು.
ಪ್ರತಿಭಟನೆ ಸ್ಥಳಕ್ಕೆ ಶಾಸಕ ಯತ್ಪಾಲ್ ಸುವರ್ಣ ಆಗಮಿಸಿ ಅಹವಾಲು ಸ್ವೀಕಾರ ಮಾಡಿದರು. ಬಳಿಕ ಮಾತನಾಡಿ, ನಿಮ್ಮ ಬೇಡಿಕೆಗಳಿಗೆ ಸದಾ ಬೆಂಬಲ ಇದೆ.ಶಾಸಕನಾಗಿ ನಾನು ನಿಮ್ಮ ಬೇಡಿಕೆ ಈಡೇರಿಕೆಗೆ ಸರಕಾರದ ಮಟ್ಟದಲ್ಲಿ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.














