
ಕುಂದಾಪುರ: ಕುಂದಾಪುರ ಪುರಸಭಾ ಕಚೇರಿ ಮುಂಭಾಗದಲ್ಲಿ ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಅವರ ಮನವಿಯನ್ನ ಸ್ವೀಕರಿಸಿ ಮಾತನಾಡಿದ ಶಾಸಕರು ಪೌರ ಕಾರ್ಮಿಕರು ಇಲ್ಲದೆ ನಾವು ನಗರನ್ನು ಪಟ್ಟಣವನ್ನು ಊಹಿಸಲು ಸಾಧ್ಯವಿಲ್ಲ ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ. ನಿಮ್ಮ ನ್ಯಾಯಯುತ ಬೇಡಿಕೆಗೆ ನನ್ನ ಬೆಂಬಲವಿದೆ ಈ ಬಗ್ಗೆ ಪೌರ ಕಾರ್ಮಿಕರ ನೇಮಕಾತಿ ಖಾಯಂಗೆ ಹಾಗೂ ಜೀವನಾಧಾರ ಬೇಡಿಕೆಗಳ ಈಡೇರಿಕೆಗಾಗಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಅವರ ಸಮಸ್ಯೆ ಬಗೆಹರಿಸುವ ಬಗ್ಗೆ ಶೀಘ್ರವೇ ರಾಜ್ಯದ ಮುಖ್ಯಮಂತ್ರಿಯವರ ಹಾಗೂ ಸಂಬಂಧಪಟ್ಟ ಪೌರಾಡಳಿತ ಮತ್ತು ಹಜ್ ಖಾತೆ ಸಚಿವರ ಗಮನಕ್ಕೆ ತಂದು ನ್ಯಾಯುತವಾಗಿ ನಿಮ್ಮ ಬೇಡಿಕೆ ಈಡೇರಿಸುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದೆಂದು ಎಂದು ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರು ಮತ್ತು ಸದಸ್ಯರು, ಅಧಿಕಾರಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.














