Friday, April 24, 2026
ಬೆಂಗಳೂರುರಾಜ್ಯಸುದ್ದಿ

ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ 1,000 ರೂ. ದಂಡ : ರಾಜ್ಯ ಸರ್ಕಾರದಿಂದ ಗೆಜೆಟ್ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ ದಂಡ ಕಟ್ಟಲೇಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1,000 ರೂ. ದಂಡ ಕಟ್ಟಬೇಕು.
ರಾಜ್ಯ ಸರ್ಕಾರ ಮಸೂದೆ ತಂದಿತ್ತು. ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 23ರಂದು ಅಂಕಿತ ಹಾಕಿದರು. ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ, ಕಾಯ್ದೆ ಜಾರಿಗೆ ತರಲಾಗಿದೆ.
ಇನ್ನು 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕಾಯ್ದೆ ಉಲ್ಲಂಘಿಸಿದವರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು