ಕೋಮು ಸೌಹಾರ್ದತೆಗೆ ಧಕ್ಕೆ ಪೋಸ್ಟ್; ಆರೋಪಿ ವಿರುದ್ದ ಪ್ರಕರಣ ದಾಖಲು -ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಹಾಕಿದ್ದು ಅವನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂತಹ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.















