ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ನಿರ್ಬಂಧ : ಹೈಕೋರ್ಟ್ ಮೊರೆ ಹೋದ ನಿರ್ಮಾಪಕರು – ಕಹಳೆ ನ್ಯೂಸ್

ರಾಜ್ಯದಲ್ಲಿ ಸಿನಿಮಾ ಬಿಡುಗಡೆಗೆ ನಿರ್ಬಂಧ ಹೇರುವುದು ಖಂಡನೀಯ. ಸಿನಿಮಾ ಬಿಡುಗಡೆಗೆ ಅವಕಾಶ ನೀಡಬೇಕೆಂದು ಚಿತ್ರದ ನಿರ್ಮಾಪಕರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಕಮಲ್ ಹಾಸನ್ ನಟನೆಯ ಹೊಸ ಸಿನಿಮಾ ಥಗ್ ಲೈಫ್ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ನಿಷೇಧ ಹೇರಲು ಕನ್ನಡ ಚಿತ್ರರಂಗ ಮತ್ತು ಕನ್ನಡಪರ ಸಂಘಟನೆಗಳು ನಿರ್ಣಯ ಕೈಗೊಂಡಿವೆ. ಈ ಹಿನ್ನೆಲೆಯಲ್ಲಿ, ನಟ ಕಮಲ್ ಹಾಸನ್ ಅವರು ತಮ್ಮ ಸಂಸ್ಥೆ ರಾಜ್ ಕಮಲ್ ಫಿಲ್ಡ್ ಇಂಟರ್ನ್ಯಾಷನಲ್ ಸಿಇಒ ಮೂಲಕ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಕಮಲ್ ಹಾಸನ್ ಕ್ಷಮೆ ಕೇಳಬೇಕೆಂದು ಕನ್ನಡ ಪರ ಸಂಘಟನೆಗಳು ಪಟ್ಟು ಹಿಡಿದಿದೆ. ಕ್ಷಮೆ ಕೇಳಲು ಫಿಲ್ಮ್ ಚೇಂಬರ್ ನಟ ಕಮಲ್ ಹಾಸನ್ ಗೆ 24 ಗಂಟೆ ಗಡುವು ನೀಡಿದೆ ಎಂಬ ಮಾಹಿತಿ ಲಭ್ಯ ವಾಗಿದೆ.









