ಮಾನ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಕುಂದಾಪುರ ಶ್ರೀಮತಿ ಶಶಿಕಲಾ ಸೇವಾ ನಿವೃತ್ತಿ – ಕಹಳೆ ನ್ಯೂಸ್

ಮಾನ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಕುಂದಾಪುರ ಶ್ರೀಮತಿ ಶಶಿಕಲಾ ಇವರು ಸೇವಾ ನಿವೃತ್ತಿ ಹೊಂದಿದ್ದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಶ್ರೀ ಹಾಕಪ್ಪ ಲಮಾಣಿ, ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಪ್ರಭಾಕರ್ ವಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ರಮೇಶ ಕುಲಾಲ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳಾದ ಶ್ರೀಮತಿ ಆಶಾದೇವಿ ನಾಯಕ, ನಿಲಯ ಮೇಲ್ವಿಚಾರಕರಾದ ಆಶಾಲತಾ, ಸಂಜೀವ, ಹಾಗೂ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದು ಶುಭ ಹಾರೈಸಿದರು.














