Thursday, March 12, 2026
ಬೆಂಗಳೂರುರಾಜ್ಯಸುದ್ದಿ

ಬ್ಯಾಂಕ್‌ ಖಾತೆಗೆ 4000 ರೂ…ಗೃಹ ಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಗ್ ಅಪ್‌ಡೇಟ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ರಾಜ್ಯದ ಸಾಕಷ್ಟು ಮಹಿಳೆಯರಿಗೆ ಅನುಕೂಲವಾಗಿದೆ. ಕೆಲವರು ಇದೇ ಹಣದಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂದು ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ಪ್ರತಿಕ್ರಿಯಿಸಿದ್ದು, ಏಪ್ರಿಲ್ ತಿಂಗಳದ್ದು ಹಣ ಬಿಲ್ಲಿಂಗ್ ಆಗುತ್ತಿದೆ. ಮಾರ್ಚ್ ತಿಂಗಳದ್ದು ಇಯರ್ ಎಂಡ್ ಆಗಿದ್ದರಿಂದ ತಡವಾಗಿದೆ. ಆದಷ್ಟು ಬೇಗ ಹಣ ಹಾಕುತ್ತೇವೆ. ಗೃಹ ಲಕ್ಷ್ಮೀ ಯೋಜನೆಯ 19 ಕಂತು ಈಗಾಗಲೆ ಹಾಕಲಾಗಿದೆ. ಶೀಘ್ರವೇ 20ನೇ ಕಂತನ್ನೂ ಹಾಕುತ್ತೇವೆ. ಮಾರ್ಚ್ ತಿಂಗಳದ್ದು ಸ್ವಲ್ಪ ತಾಂತ್ರಿಕ ಸಮಸ್ಯೆಯಾಗಿದೆ, ಏಪ್ರಿಲ್ ಹಣ ಇಷ್ಟರಲ್ಲೇ ಜಮಾ ಆಗಲಿದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಾಧ್ಯಮಗಳ ಜೊತೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾತನಾಡಿ, ಸಂಪುಟ ವಿಸ್ತರಣೆ, ಮುಖ್ಯಮಂತ್ರಿ ಬದಲಾವಣೆ ಕುರಿತು ನಮ್ಮ ಪಕ್ಷಕ್ಕೆ ಹೈಕಮಾಂಡ್ ಇದೆ. ಅವರು ಎಲ್ಲ ಶಾಸಕರ ಅಭಿಪ್ರಾಯ ಪಡೆದು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧಳಾಗಿ ನಡೆದುಕೊಳ್ಳುವವಳು, ಶಿಸ್ತು ಪಾಲಿಸುವವಳು. ಈ ಪ್ರಶ್ನೆಗಳಿಗೆ ನನ್ನಲ್ಲಿ ಉತ್ತರವಿಲ್ಲ ಎಂದು ಸ್ಪಷ್ಟಪಡಿಸಿದರು.

ಜಾಹೀರಾತು
ಜಾಹೀರಾತು

ಸರಕಾರ 2 ವರ್ಷ ಪೂರೈಸಿರುವ ಸಂದರ್ಭದಲ್ಲಿ ಜನರಿಗೆ ಏನು ಹೇಳಲು ಬಯಸುತ್ತೀರಿ ಎಂದು ಕೇಳಿದಾಗ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಜನರ ಜೀವನದಲ್ಲಿ ಒಳ್ಳೆಯದಾಗಲಿ, ಜನರಿಗೆ ಅನುಕೂಲವಾಗಲಿ ಎನ್ನುವ ನೀತಿ, ಸಿದ್ದಾಂತದಿಂದ ಆಡಳಿತ ನಡೆಸುತ್ತಿದೆ. ನಾವು ಚುನಾವಣೆಗೆ ಮುನ್ನ ನೀಡಿದ ಎಲ್ಲ ವಾಗ್ದಾನಗಳನ್ನೂ ಈಡೇರಿಸಿದ್ದೇವೆ. ಹಾಗಾಗಿ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಉಪಮುಖ್ಯಮಂತ್ರಿಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ಭರವಸೆ ಇದೆ ಎಂದರು.

ನಾವು ಅಧಿಕಾರಕ್ಕೆ ಬಂದ ತಕ್ಷಣ ಸಂವಿಧಾನ ಪೀಠ ಓದು ಜಾರಿಗೆ ತಂದಿದ್ದೇವೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವುದು ನಮ್ಮ ತತ್ವ. ಮಹಿಳೆಯರ ಸಬಲೀಕರಣ ಗುರಿ ಇಟ್ಟುಕೊಂಡು ಹಲವಾರು ಯೋಜನೆ ತಂದಿದ್ದೇವೆ. ಈ ದಿಸೆಯಲ್ಲಿ ದೃಢ ಹೆಜ್ಜೆ ಇಟ್ಟಿದ್ದೇವೆ. ಮಹದಾಯಿ ಯೋಜನೆ ವಿರುದ್ಧ ಪರಿಸರ ವಾದಿಗಳು ಈಗ ಹೋರಾಟ ನಡೆಸುತ್ತಿರುವ ಕುರಿತು ಪ್ರಶ್ನಿಸಿದಾಗ, ಬಹಳ ವರ್ಷಗಳ ಹೋರಾಟದ ಫಲವಾಗಿ ಮಹದಾಯಿ ಯೋಜನೆ ಈಗ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಇದು ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಇದಕ್ಕೆ ಪರಿಸರವಾದಿಗಳು ಅಡ್ಡಿಪಡಿಸಬಾರದು ಎಂದು ವಿನಂತಿಸುತ್ತೇನೆ. ಜನರ ಹಗೂ ಜಾನುವಾರುಗಳ ಜೀವದ ಪ್ರಶ್ನೆ ಇದರಲ್ಲಿದೆ. ದಯಮಾಡಿ ಅಡ್ಡಿಪಡಿಸಬೇಡಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು.

ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಿ, ಅನುದಾನ ತಂದಿರುವ ಕ್ರೆಡಿಟ್ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರಿಗೆ ಸಲ್ಲಬೇಕೇ ವಿನಃ ಸಂಸದ ಜಗದೀಶ ಶೆಟ್ಟರ್ ಗೆ ಅಲ್ಲ. ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದವರು. ಸಾಮಾನ್ಯ ಜ್ಞಾನವಾದರೂ ಬೇಕಲ್ಲ, ಅವರು ಸಂಸದರಾದ ತಕ್ಷಣ ಪತ್ರ ಕೊಟ್ಟು ಬಿಟ್ಟರೆ ನೂರಾರು ಕೋಟಿ ರೂ. ಕೊಟ್ಟು ಬಿಡುತ್ತಾರಾ? ಮುಖ್ಯಮಂತ್ರಿಗಳಾಗಿದ್ದವರಿಗೆ ಈ ಕುರಿತು ಜ್ಞಾನವಿರಬೇಕಲ್ಲ. ಬಾಯಿ ಇದೆ ಎಂದು ಏನೇ ಮಾತನಾಡಿದರೂ ನಡೆಯುತ್ತಾ? ಅವರು ಸಂಸದರಿದ್ದಾರೆ, ತಮ್ಮನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಕೇಳಿದರೆ ಒಪ್ಪೋಣ, ಅದು ಬಿಟ್ಟು ನಾನು ಅನುದಾನ ತಂದಿದ್ದೇನೆ ಎಂದರೆ ಹೇಗೆ? ಅವರಿಗೆ ತಾಕತ್ತಿದ್ದರೆ ಜಿಲ್ಲೆಯಲ್ಲಿ ಸಾಕಷ್ಟು ದೇವಸ್ಥಾನಗಳಿವೆ, ಅನುದಾನ ತಂದು ಅಭಿವೃದ್ಧಿ ಮಾಡಿ ತೋರಿಸಲಿ ಎಂದು ಸವಾಲು ಹಾಕಿದರು.