Friday, March 13, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾ*ವು : ಇಂದಿನ ಎಲ್ಲಾ ಸರ್ಕಾರಿ ಕಾರ್ಯಕ್ರಮ ರದ್ದು-ಕಹಳೆ ನ್ಯೂಸ್

ಬೆಂಗಳೂರು : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಸಚಿವ ಸಂಪುಟದ ಸಭೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರನ್ನು ನೋಡಲು ಸಾವಿರಾರು ಜನರು ಬಂದಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಚಿವ ಸಂಪುಟದ ಸಭೆ ಹೊರತುಪಡಿಸಿ, ವಿಶ್ವ ಪರಿಸರ ದಿನ ಸೇರಿದಂತೆ ಉಳಿದೆಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು