ಕೇಪುವಿನ ದ.ಕ.ಜಿ. ಪಂ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳಿಗೆ ಪೆನ್ಸಿಲ್, ಸಿಹಿ ತಿಂಡಿ ಕೊಟ್ಟು ಶಾಲಾ ಪ್ರಾರಂಭೋತ್ಸವ – ಕಹಳೆ ನ್ಯೂಸ್

ಕೇಪು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ ಜೂ. 02 ರಂದು ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಮಕ್ಕಳಿಗೆ ಪೆನ್ಸಿಲ್ ಕೊಟ್ಟು ಸಿಹಿ ತಿಂಡಿ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ, ಗ್ರಾಮ ಪಂಚಾಯತ್ ಸದಸ್ಯರಾದ ಪುರುಷೋತ್ತಮ ಗೌಡ ಕಲ್ಲಂಗಳ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೆಂಕಟ ರಾಘವೇಂದ್ರ ಸ್ವಾಮಿ,ಶ್ರೀ ಉಳ್ಳಾಳ್ತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಬೆಂಗ್ರೋಡಿ, ಕಾರ್ಯದರ್ಶಿ ಉಮೇಶ್ ಗೌಡ ಕೊರತಿಗದ್ದೆ,.ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು,ಪೋಷಕರು ಮಕ್ಕಳು ಉಪಸ್ಥಿತರಿದ್ದರು.









