Thursday, March 12, 2026
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆ ನಿಷೇಧ-ಕಹಳೆ ನ್ಯೂಸ್

ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆಗಸ್ಟ್ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆಗಸ್ಟ್ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಪ್ರಾರಂಭಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಸೂಚಿಸಿದರು. ಮೂರು ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ. 11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದೇವಾಲಯದ ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ ಕಲ್ಪಿಸಲಾಗಿದೆ. ಅರ್ಚಕರ 249 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಅರ್ಚಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ರೂ.34,37,000 ನೀಡಲಾಗಿದೆ. ಮರಣ ಹೊಂದಿದ 7 ಅರ್ಚಕರ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಮರಣೋತ್ತರ ಪರಿಹಾರವಾಗಿ 14 ಲಕ್ಷ ರೂಪಾಯಿ ನೀಡಲಾಗಿದೆ ಎಂದರು.

ಜಾಹೀರಾತು
ಜಾಹೀರಾತು