Thursday, March 12, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಾಕೃತಿಕ ವಿಕೋಪ: ವರದಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ -ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಭೂಕುಸಿತ, ನೀರಿನಿಂದ ಮುಳುಗಡೆ ಸೇರಿದಂತೆ ತೀವ್ರ ಮಳೆಯಿಂದ ಅವಘಡ ನಡೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು ಮೊದಲೇ ಗುರುತಿಸಬೇಕು. ರೆಡ್ ಅಲರ್ಟ್ ಅವಧಿಯಲ್ಲಿ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅಪಾಯಗಳ ಬಗ್ಗೆ ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಿ ತಿಳಿಸಬೇಕು. ಸಂಭಾವ್ಯ ಭೂಕುಸಿತ ಅನಾಹುತ ಸ್ಥಳಗಳನ್ನು ಗುರುತಿಸದೆ ಅನಾಹುತ ಸಂಭವಿಸಿದರೆ ಆಯಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಜಾಹೀರಾತು
ಜಾಹೀರಾತು

ಸ್ಥಳೀಯ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಯೋಜನೆ ರಚಿಸಬೇಕು. ಸಂಬಂಧಪಟ್ಟ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಪರಿಶೀಲಿಸಬೇಕು. ಪ್ರಾಕೃತಿಕ ದುರಂತ ಸಂಭವಿಸಿದರೆ ಜೀವಹಾನಿ ತಪ್ಪಿಸುವುದು ಆದ್ಯತೆಯಾಗಬೇಕು. ಜನವಸತಿ ಪ್ರದೇಶ ಮತ್ತು ಮನೆಗಳಲ್ಲಿ ವಾಸಿಸುವ ಸಾರ್ವಜನಿಕರ ರಕ್ಷಣೆ ಪ್ರಮುಖ ಗುರಿ. ಈ ನಿಟ್ಟಿನಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಪ್ರತಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥೂಲವಾಗಿ ಪರಿಶೀಲಿಸಬೇಕು. ಪ್ರತಿ ವಾರ್ಡ್ ವ್ಯಾಪ್ತಿಯಲ್ಲಿ ಪರಿಶೀಲಿಸಿ ವಿಪತ್ತು ನಿರ್ವಹಣೆ ಯೋಜನೆ ತಯಾರಿಸಬೇಕು ಎಂದು ಅವರು ಹೇಳಿದರು.

ಗುಡ್ಡ ಕಡಿದು ಮನೆ ನಿರ್ಮಿಸುವುದು ಅಪಾಯಕಾರಿಯಾಗಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಪ್ರಾಕೃತಿಕ ನೀರಿನ ಹರಿವನ್ನು ತಿರುಗಿಸುವುದು ಕೂಡ ಪ್ರಾಕೃತಿಕ ದುರಂತಗಳಿಗೆ ಕಾರಣವಾಗಬಲ್ಲದು ಎಂದು ಜಿಲ್ಲಾಧಿಕಾರಿ ಹೇಳಿದರು.

ಶಾಲಾ ಕಟ್ಟಡ ಸುಃಸ್ಥಿತಿಯಲ್ಲಿರುವ ಬಗ್ಗೆ ಸಂಬಂಧಪಟ್ಟ ಮುಖ್ಯ ಶಿಕ್ಷಕರಿಂದ ವರದಿ ಪಡೆಯಬೇಕು. ಅಂಗನವಾಡಿ ಕಟ್ಟಡಗಳ ಕ್ಷಮತೆಯನ್ನು ಪರಿಶೀಲಿಸಬೇಕು. ರಾಷ್ಟ್ರೀಯ ಹೆದ್ದಾರಿ ಕೆತ್ತಿಕಲ್‍ನಲ್ಲಿ ಭೂಕುಸಿತ ತಡೆಯುವ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಅಸಮಾಧಾನ ವ್ಯಕ್ತಪಡಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ಸಿಕ್ಕಿದ್ದು ಶೀಘ್ರವೇ ಪ್ರಾರಂಭಿಸಲಾಗುವುದು ಎಂದರು.

ತೀವ್ರ ಗಾಳಿ ಮಳೆಗಳ ಸಂದರ್ಭದಲ್ಲಿ ಮೀನುಗಾರಿಕೆಗೆ ತೆರಳಿದ ದೋಣಿಗಳು ಎನ್.ಎಂ.ಪಿ.ಟಿ ಬಂದರು ಪ್ರವೇಶಿಸುವ ಕುರಿತು ಎನ್.ಎಂ.ಪಿ.ಎ ಮತ್ತು ಮೀನುಗಾರಿಕೆ ಇಲಾಖೆ ಜಂಟಿಯಾಗಿ ಸೂಕ್ತ ಕಾರ್ಯವಿಧಾನ ರೂಪಿಸುವಂತೆ ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ, ಎಸ್‌ಪಿ ಡಾ.ಅರುಣ್ ಕೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಯಂಟನಿ ಮರಿಯಪ್ಪ, ಡಿಸಿಪಿ ಸಿದ್ದಾರ್ಥ್ ಗೋಯಲ್ ಉಪಸ್ಥಿತರಿದ್ದರು.

ವಿಮಾನ ನಿಲ್ದಾಣಕ್ಕೆ ಸೂಚನೆ

ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತ ಇರುವ ಜನವಸತಿ ಪ್ರದೇಶಗಳಿಗೆ ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗಿ ಸಮಸ್ಯೆಯಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ಒಂದು ವರ್ಷ ಮೊದಲೇ ತಿಳಿಸಲಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದ ಜಿಲ್ಲಾಧಿಕಾರಿ ಈ ಬಗ್ಗೆ ಬುಧವಾರ ಮಧ್ಯಾಹ್ನದೊಳಗೆ ವರದಿ ನೀಡುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಹಾಗೂ ಮುಂದಿನ ಯೋಜನೆಗಳ ಬಗ್ಗೆ ವರದಿ ನೀಡಬೇಕು. ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.