Thursday, March 12, 2026
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಶ್ವಕರ್ಮ ಯೋಜನೆಯ ಟೂಲ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ: ಶಾಸಕ ಎ.ಕಿರಣ್ ಕೊಡ್ಗಿ ಭಾಗಿ-ಕಹಳೆ ನ್ಯೂಸ್

ಸಾಲಿಗ್ರಾಮ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಆಯೋಜಿಸಲಾದ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಿಎಂ ವಿಶ್ವಕರ್ಮ ಯೋಜನೆಯ ಟೂಲ್ ಕಿಟ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ. ಬ್ಯಾಂಕಿನ ಮುಖ್ಯಸ್ಥರು ಯೋಜನೆಯ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಯಾವುದೇ ಫಲಾನುಭವಿಗಳಿಗೆ ಸೂಕ್ತ ಸಹಕಾರ ನೀಡಬೇಕು ಎಂದು ತರಬೇತಿ ಪಡೆದ ಫಲಾನುಭವಿಗಳಿಗೆ ಟೋಲ್ ಕಿಟ್ ವಿತರಿಸಿ ಶುಭಹಾರೈಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕ ಮಾತನಾಡಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮಾತನಾಡಿದ ಅವರು ಪಿಎಂ ವಿಶ್ವಕರ್ಮ ಯೋಜನೆ ಅಡಿ ಉದ್ಯಮಗಳನ್ನು ಸ್ಥಾಪಿಸುವವರಿಗೆ ವ್ಯಾಪಾರ ವ್ಯವಹಾರ ನಡೆಸುವವರಿಗೆ ರಾಷ್ಟ್ರೀಕೃತ ಬ್ಯಾಂಕ್ ಗಳು ಸಿಬಿಲ್ ಸ್ಕೂರ್ ಗಳನ್ನು ಪರಿಗಣಿಸುವಂತಿಲ್ಲ ಎನ್ನುವ ಆದೇಶ ಕೇಂದ್ರ ಸರ್ಕಾರ ಹೊರಡಿಸಿದ್ದು ಯೋಜನೆಯ ಸೌಲಭ್ಯ ಪಡೆಯಲು ಯಾವುದೇ ಸಮಸ್ಯೆ ಆದರೆ ಜನಪ್ರತಿನಿಧಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬಹುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷೆ ಶ್ರೀಮತಿ ಗಿರಿಜಾ ಪೂಜಾರ್ತಿ,, ಸ್ಥಾಯೀ ಸಮಿತಿ ಅಧ್ಯಕ್ಷೆ ಅನುಸೂಯ ಹೇರಳೆ, ಅಂಚೆ ಇಲಾಖೆಯ ಅಧಿಕಾರಿ ಶಂಕರ್ ಲಂಬಾಣಿ , ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಅಜಯ್ ಭoಡಾರ್ಕರ್ ಸರ್ವರನ್ನು ಸ್ವಾಗತಿಸಿದರು.
ಕಾರ್ಯಕ್ರಮವನ್ನ ಕೋಟ ಶ್ರೀನಿವಾಸ್ ಪೂಜಾರಿಯವರ ಆಪ್ತ ಕಾರ್ಯದರ್ಶಿ ಹರೀಶ್ ಶೆಟ್ಟಿ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಸದಸ್ಯರು , ಗ್ರಾಮ ಪಂಚಾಯಿತಿನ ಸಿಬ್ಬಂದಿ ವರ್ಗದವರು, ಫಲಾನುಭವಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.