Homeಜಿಲ್ಲೆದಕ್ಷಿಣ ಕನ್ನಡದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ದರ್ಶನ್ ಎಚ್.ವಿ – ಕಹಳೆ ನ್ಯೂಸ್
ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ದರ್ಶನ್ ಎಚ್.ವಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರು ನಿನ್ನೆ (ಜೂ.18) ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
ಮುಲ್ಲೈ ಮುಗಿಲನ್ ಎಂಪಿ ಜೂ.17, 2023ರಂದು ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ 2 ವರ್ಷ ಪೂರ್ಣಗೊಳಿಸಿರುವ ಬೆನ್ನಲ್ಲೆ ಅವರಿಗೆ ವರ್ಗಾವಣೆಯಾಗಿದೆ. ಅಲ್ಲದೇ 2016 ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿರುವ ದರ್ಶನ್ ಎಚ್.ವಿ. ಅವರು ವಾಣಿಜ್ಯ ತೆರಿಗೆಗಳ ಇಲಾಖೆಯ ಬೆಂಗಳೂರಿನ ಸೇವಾ ವಿಶ್ಲೇಷಣೆ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದರು.















