
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದು, ಶುಕ್ರವಾರ ನೆಲ ಮಂಗಲದ ಸಮೀಪ ನಡೆಯುವ ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಗುರುವಾರ ರಾತ್ರಿ 9 ಗಂಟೆಗೆ ಅವರು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವರು ಆಗಮಿಸಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲಿದ್ದಾರೆ.
ಶುಕ್ರವಾರ ಬೆಳಗ್ಗೆ 10.30ಕ್ಕೆ ನೆಲಮಂಗಲಕ್ಕೆ ತೆರಳಿ ಅದೇ ದಿನ ಮಧ್ಯಾಹ್ನ ದಿಲ್ಲಿಗೆ ಮರಳಲಿದ್ದಾರೆ.















