Wednesday, March 11, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪತಿ ಹಾಗೂ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆ : ಪ್ರಕರಣ ದಾಖಲು

ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಮೃತಪಟ್ಟವರು. ತಿಮ್ಮಪ್ಪ ಮೂಲ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕುತ್ತಿಗೆ ಭಾಗದಲ್ಲಿ ಗಾಯಗಳಿವೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು

ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ‌. ಇವರಿಗೆ ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿರಲಿಲ್ಲ.
ಪ್ರಸ್ತುತ ಪತ್ನಿ ಗರ್ಭಿಣಿಯಾಗಿದ್ದು, ಸೀಮಂತದ ದಿನಾಂಕವೂ ನಿಗದಿಯಾಗಿತ್ತು ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.