ಗ್ರಾಮ ಪಂಚಾಯತ್ ಸಭೆಯಲ್ಲಿ ‘ತುಳು’ ಭಾಷೆ ಬಳಸದಂತೆ ಸೂಚನೆ : ವಿವಾದ ಸೃಷ್ಟಿಸಿದ ಸರ್ಕಾರದ ಆದೇಶ -ಕಹಳೆ ನ್ಯೂಸ್

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಲಾಗಿದ್ದು, ತುಳು ಭಾಷಿಕರು ಅಸಮಾಧಾನ ಹೊರ ಹಾಕಿದ್ದಾರೆ.
ಉಲ್ಲೇಖಿತ ಮನವಿಯನ್ನು ಈ ಪತ್ರದೊಂದಿಗೆ ಲಗತ್ತಿಸುತ್ತಾ, ಮನವಿಯ ಕುರಿತು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಿದೆ.
ಕೋಟ ಶ್ರೀನಿವಾಸ್ ಪೂಜಾರಿ ಕಿಡಿ
ವಿಧಾನಸಭೆಯಲ್ಲಿ ಅಧ್ಯಕ್ಷರು ಸೇರಿದಂತೆ ಶಾಸಕರೆಲ್ಲ ತುಳುವಿನಲ್ಲಿ ಸಂವಹನ ಮಾಡಬಹುದಾದರೆ ಗ್ರಾಮ ಪಂಚಾಯತಿಗಳಲ್ಲಿ ತುಳು ಮಾತನಾಡಬಾರದೆಂದರೆ ಏನರ್ಥ? ಈ ಸರ್ಕಾರಕ್ಕೆ ಏನಾಗಿದೆ ಎಂಬುದೇ ಅರ್ಥ ಆಗುತ್ತಿಲ್ಲ. ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಭಾಷೆಯಲ್ಲೇ ವ್ಯವಹರಿಸಬೇಕೇ ಹೊರತು ಇದೇ ಭಾಷೆ ಮಾತಾಡಬೇಕು ಎಂದು ಹೇರಿಕೆ ಮಾಡುವುದು ಸರಿಯಲ್ಲ ಎಂದು ಕೋಟ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ.














