Recent Posts

Saturday, September 12, 2026
ಸುದ್ದಿ

ಇರಾನ್‌- ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ನವದೆಹಲಿ: ಇರಾನ್‌- ಇಸ್ರೇಲ್‌ ನಡುವೆ ಸಂಘರ್ಷ ತಾರಕಕ್ಕೆ ಏರಿದ ಬೆನ್ನಲ್ಲೇ ಭಾರತ ಪ್ರಧಾನಿ ನರೇಂದ್ರ ಮೋದಿ ರಂಗಪ್ರವೇಶ ಮಾಡಿದ್ದಾರೆ. ಇರಾನ್‌ನ ಅಧ್ಯಕ್ಷರಿಗೆ ಖುದ್ದಾಗಿ ಕರೆ ಮಾಡಿ ಸಂಘರ್ಷ ಶಮನಕ್ಕೆ ಸಲಹೆ ನೀಡಿದ್ದಾರೆ.

ಜಾಹೀರಾತು

ಅಮೆರಿಕ ಸೇನೆಯು ಇರಾನ್‌ನ ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರಿಗೆ ಮೋದಿ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.
ಅಲ್ಲದೆ, ಭಾರತದ ನಿಲುವಿಗೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇರಾನ್ ಅಧ್ಯಕ್ಷ ಮಸೂದ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದೆ. ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರವಾಗಿ ಚರ್ಚಿಸಿದೆವು. ಈ ಸಂಘರ್ಷದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದೇನೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷವನ್ನು ಶಮನಗೊಳಿಸಿ ಆದಷ್ಟು ಬೇಗ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಸ್ಥಾಪಿಸುವಂತೆ ಸಲಹೆ ನೀಡಿದ್ದೇನೆ ಎಂದು ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮಸೂದ್ ಪೆಜೆಶ್ಕಿಯಾನ್ ಮತ್ತು ಮೋದಿ ನಡುವೆ 45 ನಿಮಿಷಗಳ ಕಾಲ ಮಾತುಕತೆ ನಡೆಯಿತು. ಈ ವೇಳೆ ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಉತ್ತೇಜಿಸುವಲ್ಲಿ ಭಾರತ ಸ್ನೇಹಿತ ಮತ್ತು ಪಾಲುದಾರ ಎಂದು ಪೆಜೆಶ್ಕಿಯಾನ್ ಬಣ್ಣಿಸಿದರು.