Wednesday, March 11, 2026
ಉಡುಪಿಸುದ್ದಿ

ಗೋಕಳ್ಳತನ, ಗೋಮಾಂಸ ಸಾಗಾಟ; ಪೊಲೀಸರ ಕಾರ್ಯಾಚರಣೆ- ಇಬ್ಬರ ಬಂಧನ – ಕಹಳೆ ನ್ಯೂಸ್

ಡುಪಿ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ನಿಂದ ಮೂರು ಹಸುಗಳನ್ನು ಕಳ್ಳತನಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಲೀಂ(38) ಬಂಧಿತ ಆರೋಪಿ. ಈತನನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೊಂದು ಪ್ರಕರಣದಲ್ಲಿ ಗಂಗೊಳ್ಳಿ ಕಡೆಗೆ ತೆರಳುವ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು

ಅಬ್ದುಲ್ ರಹೀಮ್(35) ಬಂಧಿತ ಆರೋಪಿ. ಈತನಿಂದ ಸ್ಕೂಟರ್ ಮತ್ತು 25 ಕೆಜಿ ದನದ ಮಾಂಸ ವಶಪಡಿಸಿಕೊಳ್ಳಲಾಗಿದ್ದು ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಇನ್ನೊಂದು ಪ್ರಕರಣದಲ್ಲೂ ಇದೇ ಆರೋಪಿ ಭಾಗಿಯಾಗಿದ್ದು ಈತನ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ.