Recent Posts

Saturday, September 12, 2026
ಬೆಂಗಳೂರುರಾಜ್ಯಸುದ್ದಿ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಗಳ ರಾಜ್ಯಾಧ್ಯಕ್ಷರ ಘೋಷಣೆ’-ಕಹಳೆ ನ್ಯೂಸ್

ಬೆಂಗಳೂರು : ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲರ ಅಭಿಪ್ರಾಯ ಪಡೆದಿದ್ದಾರೆ.

ಜಾಹೀರಾತು

ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಕೆಲಸ- ಸಂಘಟನಾ ಕಾರ್ಯ ಮಾಡಿದ್ದೇನೆ ಎಂಬ ವಿಶ್ವಾಸ ನನ್ನಲ್ಲಿದೆ. ನಮ್ಮ ಕಾರ್ಯಕರ್ತರಲ್ಲೂ ಇದೆ. ನಮ್ಮ ಮುಖಂಡರಲ್ಲೂ ಇದೆ. ಹಾಗಾಗಿ ಒಳ್ಳೆಯದಾಗಲಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದ ಬಿಜೆಪಿ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಇನ್ನೂ ನೇಮಕಾತಿ ಆಗುತ್ತಿಲ್ಲ. ಗೊಂದಲಗಳಿದ್ದು ಮುಂದೂಡುತ್ತಿದ್ದಾರೆ ಎಂಬುದು ಯಾವುದೂ ಸತ್ಯವಲ್ಲ. ಈಗ ದೇಶದ 14 ರಾಜ್ಯಗಳ ಅಧ್ಯಕ್ಷರ ಆಯ್ಕೆ ಮುಗಿದಿದೆ. ಈ ವಿಚಾರದಲ್ಲಿ ಘೋಷಣೆಯೂ ಆಗಿದೆ. ಸದ್ಯವೇ, ಅತಿ ಶೀಘ್ರದಲ್ಲೇ ಇನ್ನು ಆರೇಳು ರಾಜ್ಯಗಳ ಅಧ್ಯಕ್ಷರ ಘೋಷಣೆ ಆಗಲಿದೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಅದಾದ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಘೋಷಣೆ ಆಗಲಿದೆ. ಕರ್ನಾಟಕ ಒಂದೇ ಅಲ್ಲ. ಡಿ.ವಿ.ಸದಾನಂದಗೌಡರ ಹೇಳಿಕೆ ಅರ್ಧ ಸತ್ಯ. ಉತ್ತರ ಪ್ರದೇಶ ರಾಜ್ಯದ ಅಧ್ಯಕ್ಷರ ನೇಮಕಾತಿಯೂ ಆಗಿಲ್ಲ. ತೆಲಂಗಾಣ- ಕರ್ನಾಟಕ ರಾಜ್ಯಗಳ ಅಧ್ಯಕ್ಷರ ನೇಮಕಾತಿಯೂ ನಡೆದಿಲ್ಲ ಎಂದು ಹೇಳಿದರು.

ಬಿಜೆಪಿ ಬೂದಿ ಮುಚ್ಚಿದ ಕೆಂಡದಂತಿದೆ ಎಂಬ ಹಿರಿಯರಾದ ಡಿ.ವಿ.ಸದಾನಂದಗೌಡರ ಹೇಳಿಕೆಯ ಬಗ್ಗೆ ಮಾತನಾಡಿ, ಡಿ.ವಿ.ಸದಾನಂದಗೌಡರು ಹಿರಿಯರಿದ್ದಾರೆ. ನಾಳೆ ಭೇಟಿ ಮಾಡಿ ಅವರ ಜೊತೆ ಚರ್ಚೆ ಮಾಡುತ್ತೇನೆ. ಬೂದಿ ಮುಚ್ಚಿದ ಕೆಂಡದಂತಿದೆ ಎಂಬುದನ್ನು ನಾನು ಒಪ್ಪುವುದಿಲ್ಲ ಎಂದು ತಿಳಿಸಿದರು. ಸಣ್ಣಪುಟ್ಟ ಅಭಿಪ್ರಾಯ ವ್ಯತ್ಯಾಸ ಇರುವುದು ಸಹಜ ಎಂದು ತಿಳಿಸಿದರು.