ಕಾಲೇಜಿನಲ್ಲೇ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾ*ಚಾರ. ಸಿಬ್ಬಂದಿ ಸೇರಿ ಮೂವರ ಬಂಧನ – ಕಹಳೆ ನ್ಯೂಸ್

ಕೊಲ್ಕತ್ತಾ: ಕಾಲೇಜಿನಲ್ಲೇ ಕಾನೂನು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾಲೇಜು ಸಿಬ್ಬಂದಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನಲ್ಲಿ ಕಳೆದ ಜೂನ್ 25 ರಂದು ಸಂಜೆ 7.30 ರಿಂದ ರಾತ್ರಿ 10.50 ರ ನಡುವೆ ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು,
ದೂರು ದಾಖಲಿಸಿಕೊಂಡ ಪೊಲೀಸರು ಸಂತ್ರಸ್ತೆಯ ಪ್ರಾಥಮಿಕ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ, ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ನಡೆಸಿದ ಪೊಲೀಸರು ಕಾಲೇಜಿನ ಹಳೆ ವಿದ್ಯಾರ್ಥಿ, ಓರ್ವ ಕಾಲೇಜಿನ ಸಿಬ್ಬಂದಿ ಹಾಗೂ ಓರ್ವ ವಿದ್ಯಾರ್ಥಿಯನ್ನು ಗುರುವಾರ ಬಂಧಿಸಿದ್ದು ಜೊತೆಗೆ ಅವರ ಬಳಿಯಿದ್ದ ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
ಬಂಧಿತ ಮೂವರು ಆರೋಪಿಗಳನ್ನು ಇಂದು (ಶುಕ್ರವಾರ) ಅಲಿಪೋರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ.















