Tuesday, September 8, 2026
ಬೆಂಗಳೂರುಸುದ್ದಿ

ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಬ್ರ್ಯಾಂಡೆಡ್ ಕಂಪನಿಗಳ ನಕಲಿ ಬಟ್ಟೆ ತಯಾರಿಕೆ ಅಡ್ಡೆ ಮೇಲೆ ದಾಳಿ –ಕಹಳೆ ನ್ಯೂಸ್

ಬೆಂಗಳೂರು: ನಕಲಿ ಉತ್ಪನ್ನ ತಯಾರಿಕಾ ಅಡ್ಡೆಯ ಮೇಲೆ ತಡರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. 30 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ನಕಲಿ ಬ್ರ್ಯಾಂಡೆಡ್ ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಹೀರಾತು

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೈಲಕೋನೇನಹಳ್ಳಿ ದಾಳಿ ನಡೆಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪೂಮಾ, ನೈಕಿ, ರಾಲ್ಪ್ ಲಾರೆನ್ಸ್, ಲೆವಿಸ್, ಪೋಲೋ ಮೊದಲಾದ ಪ್ರತಿಷ್ಠಿತ ಬ್ರ್ಯಾಂಡ್ ಗಳ ನಕಲಿ ಉತ್ಪನ್ನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ಬ್ರ್ಯಾಂಡೆಡ್ ಕಂಪನಿಗಳ ಹೆಸರಿನಲ್ಲಿ ನಕಲಿ ಜೀನ್ಸ್ ಗಳನ್ನು ತಯಾರಿಸಲಾಗುತ್ತಿತ್ತು. ಅಕ್ರಮವಾಗಿ ಗೋದಾಮಿನಲ್ಲಿ ನಕಲಿ ಬಟ್ಟೆಗಳನ್ನು ತಯಾರಿಸುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.